

ನಮ್ಮ ಕನ್ನಡ ಸಮೃದ್ಧವಾಗಿದೆ ಎಂದು ನಾವು ಸುಮ್ಮನಿರಲಾಗದು. ರಾಜ್ಯವನ್ನು ಸಮೃದ್ಧ ಕರ್ನಾಟಕ ಮಾಡುವುದೇ ಸರಕಾರದ ಗುರಿಯಾಗಿದ್ದು, ಅನೇಕ ಜನಪರ, ಜನಕಲ್ಯಾಣ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಏಕೀಕೃತ ಕರ್ನಾಟಕ ರಾಜ್ಯ ಉದ್ಭವವಾದಾಗಿನಿಂದಲೂ ಕೇಳಿಬರುತ್ತಿದ್ದ ಪ್ರಾದೇಶಿಕ ಅಸಮತೋಲನದ ಕೂಗನ್ನು ನಿವಾರಿಸಲು ರಾಜ್ಯ ಸರಕಾರ ಶ್ರಮಿಸುತ್ತಿದ್ದು ಇತ್ತೀಚೆಗೆ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ಸೇರಿ ಆ ಭಾಗದ ಪ್ರಗತಿಗೆ ಅನೇಕ ಯೋಜನೆಗಳನ್ನು ಮತ್ತು ಮಹತ್ವದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ದಿಟ್ಟ ಹೆಜ್ಜೆ ಇಡಲಾಗಿದೆ ಎಂದರು.ಕಾರ್ಯಕ್ರಮದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಐವನ್ ಡಿಸೋಜ, ಮೇಯರ್ ಮನೋಜ್ ಕೋಡಿಕ್ಕಲ್, ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್, ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್, ಪ್ರವೀಣ್ ಕುಮಾರ್ ಆಳ್ವ ಎ.ಸಿ. ವಿನಯರಾಜ್, ನವೀನ್ ಡಿಸೋಜ, ಶಾಹುಲ್ ಹಮೀದ್, ಕಸಾದ ದ.ಕ. ಜಿಲ್ಲಾಧ್ಯಕ್ಷ ಎಂ.ಪಿ.ಶ್ರೀನಾಥ್, ಸದಾಶಿವ ಉಳ್ಳಾಲ್, ಕಸಾಪ ನಿಕಟಪೂರ್ವ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಕರ್ನಾಟಕ ಬ್ಯಾರಿ ಅಕಾಡೆಮಿಯ ಅಧ್ಯಕ್ಷ ಉಮರ್ ಯು.ಎಚ್., ಸ್ಟಾನಿ ಅಲ್ವಾರಿಸ್, ದೇವಿಪ್ರಸಾದ್ ಶೆಟ್ಟಿ, ಡಾ. ಶಿವಪ್ರಕಾಶ್ ಇನ್ನಿತರರು ಉಪಸ್ಥಿತರಿದ್ದರು.





