August 30, 2025
WhatsApp Image 2024-11-01 at 4.20.54 PM

ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ.ಇದೀಗ ಅವರ ವಿರುದ್ಧ ಮತ್ತೊಂದು ಆರೋಪ ಮಾಡಿದ್ದು, ಯಡಿಯೂರಪ್ಪ ಸಿಎಂ ಆಗಿದ್ದಾಗ ಸಾವಿರಾರು ಕೋಟಿ ರೂಪಾಯಿ ದುಡ್ಡು ತಿಂದಿದ್ದಾರೆ ಎಂದು ಸ್ಪೋಟಕ ವಾದಂತಹ ಆರೋಪ ಮಾಡಿದ್ದಾರೆ.

ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಎಸ್‌ವೈ ಸಿಎಂ ಇದ್ದಾಗ ಮಂತ್ರಿಯಾಗು ಎಂದಿದ್ದರು ಆದರೆ ನಾನು ಆಗಿರಲಿಲ್ಲ. ಅವರು ಸಿಎಂ ಇದ್ದಾಗ ಸಾವಿರಾರು ಕೋಟಿ ರೂ. ಹಣ ತಿಂದಿದ್ದಾರೆ. ಭ್ರಷ್ಟ ಸಿಎಂ ಮಂತ್ರಿಮಂಡಲದಲ್ಲಿ ನಾನು ಇರಲ್ಲ ಎಂದು ತಿರಸ್ಕರಿಸಿದ್ದೇನೆ. ಪ್ರತಿ ನಿತ್ಯ ಅಪ್ಪ, ಮಗ ನಡ್ಡಾ ಅವರ ಬಳಿ ಹೋಗಿ, ಯತ್ನಾಳ್ ಅವರನ್ನು ತೆಗೆಯಿರಿ. ವಿಜಯೇಂದ್ರನನ್ನು ಸಿಎಂ ಮಾಡಿ ಎಂದು ಗೋಳಾಡುತ್ತಾರೆ ಎಂದು ವ್ಯಂಗ್ಯವಾಡಿದರು.

ವಿಜಯೇಂದ್ರ ನನ್ನನ್ನು ಸ್ಟಾರ್ ಮಾಡುವ ಅವಶ್ಯಕತೆಯಿಲ್ಲ. ಈ ರಾಜ್ಯದ ಜನ ನಮ್ಮನ್ನು ಒಪ್ಪಿಕೊಂಡಿದ್ದಾರೆ. ನೀವು ಹೀರೋ ಆಗಬೇಕು ಅಂದರೆ ಖರ್ಚು ಮಾಡಿ.ಕರ್ನಾಟಕದಲ್ಲಿ ಬಿಜೆಪಿ ಉಳಿಯಬೇಕಾದ್ರೆ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರನನ್ನ ತೆರವುಗೊಳಿಸಬೇಕು. ಬಿ.ಎಸ್ ಯಡಿಯೂರಪ್ಪ ಅವರನ್ನ ಯಾವುದೇ ವೇದಿಕೆಗಳಲ್ಲಿ ಕೂರಿಸಬಾರದು ಎಂದು ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ಜಾಲತಾಣ X ನಲ್ಲಿ ಬಿಜೆಪಿ ಕರ್ನಾಟಕ ಎಂದು ಒಂದು ಎಕ್ಸ್ ಖಾತೆ ಇದೆ. ಅದನ್ನು ಬಿವೈವಿ ಕರ್ನಾಟಕ ಮಾಡಿದರೆ ಒಳ್ಳೆಯದು. ಯಾಕಂದರೆ ಅದರಲ್ಲಿ ಯಡಿಯೂರಪ್ಪನವರ ಗುಣಗಾನ ಬಿಟ್ಟರೆ ಏನು ಇಲ್ಲ. ಅಭ್ಯರ್ಥಿಗಳಿಗೆ ಹಿಂದೂಗಳ ವೋಟು ಎಂದು ಕರೆಯಲಿ ಆದರೆ ಸಾಬ್ರೂ ನಿಮಗೆ ವೋಟು ಹಾಕುತ್ತಾರೆ ಎಂದು ಮಾತ್ರ ಹೇಳಬೇಡಿ ಎಂದರು.

About The Author

Leave a Reply