November 8, 2025
MANGALURU

ಮಂಗಳೂರು: ಮಾದಕ ವಸ್ತು ಹೈಡ್ರೋವೀಡ್ ಗಾಂಜಾ ಸಹಿತ ಆರೋಪಿಯೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಶುಕ್ರವಾರ ನಡೆಸಿದ ಕಾರ್ಯಾಚರಣೆಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.

ಪುತ್ತೂರು ಹಾರಾಡಿಯವನಾಗಿದ್ದು, ಪ್ರಸ್ತುತ ತೊಕ್ಕೊಟ್ಟು ಚೊಂಬುಗುಡ್ಡೆ ಮಸೀದಿ ಹತ್ತಿರದ ನಿವಾಸಿ ಎಚ್. ಮೊಹಮ್ಮದ್ ಹಫೀಜ್ (23) ಬಂಧಿತ ಆರೋಪಿ. ಬಂಧಿತನಿಂದ 30 ಲಕ್ಷ ರೂ. ಮೌಲ್ಯದ ಹೈಡ್ರೋವೀಡ್ ಗಾಂಜಾ, 2.5 ಕೆಜಿ ಗಾಂಜಾ ಹಾಗೂ ಇತರ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ನಗರದ ಕುದ್ರೋಳಿ ಪರಿಸರದಲ್ಲಿ ಹೈಡ್ರೋವೀಡ್ ಗಾಂಜಾ ಮತ್ತು ಗಾಂಜಾವನ್ನು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಯ ವಶದಿಂದ 30 ಲಕ್ಷ ರೂಪಾಯಿ ಮೌಲ್ಯದ 300 ಗ್ರಾಂ ಹೈಡ್ರೋವೀಡ್ ಗಾಂಜಾ ಹಾಗೂ 75,000 ರೂ.ಮೌಲ್ಯದ ೨.೫ ಕೆಜಿ ಗಾಂಜಾ, ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪಕವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯಿಂದ ಅಂದಾಜು 30,85,500 ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Leave a Reply