October 12, 2025
SIDDARAMAYYA

ಬೆಂಗಳೂರು: ವಕ್ಫ್‌ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದ್ದಾರೆ. ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.

ಇನ್ನು ಮುಂದೆ ಯಾವುದೇ ರೀತಿಯ ತೊಂದರೆ ಕೂಡ ರೈತರಿಗೆ ನೀಡದಂತೆ ಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಇಂದು ಕಂದಾಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಮತ್ತು ವಕ್ಫ್‌ ಮಂಡಳಿಯ ಹಿರಿಯ ಅಧಿಕಾರಿಗಳ ಜೊತೆ ಮುಖ್ಯಮಂತ್ರಿಗಳು ಸುದೀರ್ಘ ಸಭೆ ನಡೆಸಿ ವಕ್ಫ್ ವಿಚಾರವಾಗಿ ಮಾತನಾಡಿದರು.

ಅಧಿಕಾರಿಗಳೂ ಈ ಕುರಿತು ಎಚ್ಚರ ವಹಿಸಬೇಕು. ರೈತರಿಗೆ ತೊಂದರೆ ಆಗುವ ಯಾವುದೇ ತೀರ್ಮಾನವನ್ನು ಕೈಗೊಳ್ಳಬಾರದು ಎಂಬುವುದಾಗಿ ಸಿಎಂ ನಿರ್ದೇಶನ ನೀಡಿದರು.

ಸಚಿವ ಎಚ್.ಕೆ. ಪಾಟೀಲ್‌, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಪೊನ್ನಣ್ಣ, ವಕ್ಫ್‌ ಮಂಡಳಿಯ ಸಿಇಒ ಜಿಲಾನಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹಮದ್‌, ಅಲ್ಫ ಸಂಖ್ಯಾತರ ಕಲ್ಯಾಣ ಇಲಾಖೆ ಕಾರ್ಯದರ್ಶಿ ಮನೋಜ್‌ ಜೈನ್‌‌ ಮುಂತಾದವರು ಇಂದಿನ ಸಭೆಯಲ್ಲಿ ಹಾಜರಿದ್ದರು.

About The Author

Leave a Reply