
ವಿಜಯಪುರ: ವಕ್ಫ್ ಆಸ್ತಿಯನ್ನು ಅಲ್ಲಾನ ಆಸ್ತಿ ಎನ್ನುತ್ತೇವೆ. ಯಾರೂ ಸರ್ಕಾರದಿಂದ ಕೊಟ್ಟಿರುವುದಲ್ಲ ಎಂದು ಬಿಜೆಪಿ ವಿರುದ್ಧ ಸಚಿವ ಜಮೀರ್ ಅಹ್ಮದ್ ಗರಂ ಆಗಿ ಹೇಳಿಕೆ ನೀಡಿದ್ದಾರೆ.



ಮಾಧ್ಯಮದೊಂದಿಗೆ ಮಾತನಾಡಿದ ಅವರು, ವಕ್ಫ್ ಆಸ್ತಿಯನ್ನು ಅಲ್ಲಾನ ಆಸ್ತಿ ಎನ್ನುತ್ತೇವೆ ಯಾರೂ ಸರ್ಕಾರದಿಂದ ಕೊಟ್ಟಿರುವುದಲ್ಲ. ಬಿಜೆಪಿಯವರಿಗೆ ಮಾತನಾಡಲು ಯಾವುದೇ ವಿಷಯಗಳಿಲ್ಲ. ಇಷ್ಟು ದಿನ ಮುಡಾದ ಬಗ್ಗೆ ಮಾತನಾಡಿದರು. ಅದರಲ್ಲಿ ಏನೂ ಎಲ್ಲ ಎಂದು ಗೊತ್ತಾದ ಮೇಲೆ ಈಗ ವಕ್ಫ್ ಬಗ್ಗೆ ಮಾತನಾಡುತ್ತಿದ್ದಾರೆ. ಕರ್ನಾಟಕದಲ್ಲಿ ಮೂರು ಕಡೆ ಉಪಚುನಾವಣೆ ನಡೆಯಲಿದೆ. ಜೊತೆಗೆ ಮಹಾರಾಷ್ಟ್ರ ಚುನಾವಣೆ ಇದೆ. ಆದುದರಿಂದ ರಾಜಕೀಯ ಗಿಮಿಕ್‌ಗೋಸ್ಕರ ಸುಮ್ಮನೇ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ವಕ್ಫ್ ವಿಚಾರದಲ್ಲಿ ಬಿಜೆಪಿಯವರು ಅನವಶ್ಯಕ ಗೊಂದಲ ಸೃಷ್ಟಿ ಮಾಡಿದ್ದಾರೆ. ಯಾರಿಗೂ ನಾವು ನೋಟಿಸ್ ನೀಡಿಲ್ಲ. ಬಿಜೆಪಿ ಸರ್ಕಾರದಲ್ಲೂ ವಕ್ಫ್ ಆಸ್ತಿ ಅತಿಕ್ರಮಿಸಿದ ಸಾವಿರಾರು ಜನರಿಗೆ ನೋಟಿಸ್ ನೀಡಿದೆ. ವಕ್ಫ್‌ನಲ್ಲಿ ಒಂದು ಇಂಚು ಸರ್ಕಾರದ ಆಸ್ತಿ ಇಲ್ಲ. ವಕ್ಫ್ ಆಸ್ತಿ ಸಾಕಷ್ಟು ಒತ್ತುವರಿಯಾಗಿದೆ. ಅದನ್ನು ಸರಿಪಡಿಸುವ ಕೆಲಸ ನಾನು ಮಾಡುತ್ತಿದ್ದೇನೆ ಎಂಬುವುದಾಗಿ ಹೇಳಿಕೆ ನೀಡಿದರು.