
ಉಡುಪಿ: ಮಿನಿ ಬಸ್ ಮತ್ತು ಲಾರಿ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಪುಣ್ಯ ಕ್ಷೇತ್ರಗಳ ದರ್ಶನಕ್ಕೆ ಹೊರಟಿದ್ದ ತಮಿಳುನಾಡಿನ 17 ಮಂದಿ ಗಾಯಗೊಂಡ ಘಟನೆ ರವಿವಾರ ಮುಂಜಾನೆ ಉಡುಪಿಯ ಉದ್ಯಾವರ ಪೆಟ್ರೋಲ್ ಬಂಕ್ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ.



ಮಂಗಳೂರು ಕಡೆಯಿಂದ ಕೊಲ್ಲೂರು ದೇವಾಲಯಕ್ಕೆ ಹೋಗುತ್ತಿದ್ದ ಮಿನಿ ಬಸ್ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಹಿಂದಿನಿಂದ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ 17 ಮಂದಿ ಗಾಯಗೊಂಡಿದ್ದು, ನಾಲ್ವರಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳೀಯರ ಸಹಕಾರದಿಂದ ಗಾಯಾಳುಗಳನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಟೂರಿಸ್ಟ್ ವಾಹನ ಜಖಂ ಗೊಂಡಿದ್ದು, ಘಟನಾ ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.