October 13, 2025
ISHWARA KHANDRE

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷ ಹಣದ ಹೊಳೆಯನ್ನೇ ಹರಿಸುತ್ತಿದೆ ಎಂಬ ಬಿಜೆಪಿ ನಾಯಕರ ಆರೋಪದ ಬಗ್ಗೆ ಸಚಿವ ಈಶ್ವರ ಖಂಡ್ರೆ ಮಾತನಾಡಿ, ಹಣದ ಹೊಳೆ ಹರಿಸುವವರು‌ ಬಿಜೆಪಿಯವರು.

ಭ್ರಷ್ಟಾಚಾರ ಮಾಡುವವರು ಬಿಜೆಪಿಯವರು. ಬಿಜೆಪಿಯವರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇದೆಯಾ? ಕೋವಿಡ್ ಸಂದರ್ಭದಲ್ಲಿ‌ ಸಾಕಷ್ಟು ಹಗರಣ ಮಾಡಿದ್ದಾರೆ. ರಾಜ್ಯದಲ್ಲಿ‌ ಸುಮಾರು 50 ಸಾವಿರ ಜನರು ಸಾವನ್ನಪ್ಪಿದ್ದಾರೆ. ಆದ್ರೆ ಅವರು ತೋರಿಸಿದ್ದು‌ ಮಾತ್ರ 4 ಸಾವಿರ ಜನ. ಅತೀ ‌ದೊಡ್ಡ ಪ್ರಮಾಣದಲ್ಲಿ ಭ್ರಷ್ಟಾಚಾರ ಮಾಡಿದವರು ಬಿಜೆಪಿಯವರೆಂದು ಸಚಿವ ಈಶ್ವರ ಖಂಡ್ರೆ ಗರಂ ಆದರು.

ಹುಬ್ಬಳ್ಳಿಯಲ್ಲಿ ಮಾತನಾಡಿದ ಖಂಡ್ರೆ, ಈ‌ ಬಗ್ಗೆ ತನಿಖೆ ಮಾಡಲು‌ ಈಗಾಗಲೇ ಸಮಿತಿ‌ ರಚಿಸಲಾಗಿದೆ.‌ ಸಮಿತಿ‌ ಈಗಾಗಲೇ ತನಿಖೆ ಮಾಡುತ್ತಿದೆ‌, ತಪ್ಪಿತಸ್ಥರಿಗೆ ಶಿಕ್ಷೆ ಆಗಲಿದೆ. ವಾಲ್ಮೀಕಿ ಮತ್ತು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರಿಗೆ ಶಿಕ್ಷೆ ನೀಡಲಾಗಿದೆ. ಇನ್ನೂ‌ ಸಹ ಈ‌ ಬಗ್ಗೆ ತನಿಖೆ ನಡೆಯುತ್ತಿದೆ. ಇದರಲ್ಲಿ ಯಾವುದೇ ಮುಚ್ಚುಮರೆ ಇಲ್ಲ ಎಂದರು.

About The Author

Leave a Reply