October 27, 2025
bantwala accident

ಬಂಟ್ವಾಳ: ಖಾಸಗಿ ಬಸ್ ಬೈಕ್‌ಗೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಓರ್ವ ಸಾವನ್ನಪ್ಪಿದ್ದು ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಬಂಟ್ವಾಳದ ಕಡೆಗೋಳಿ ಎಂಬಲ್ಲಿ ಭಾನುವಾರ ಸಂಭವಿಸಿದೆ.

ಕಡೆಗೋಳಿ ನಿವಾಸಿ ಪ್ರವೀಣ (30) ಮೃತ ದುರ್ದೈವಿ. ಸಂದೀಪ ಗಂಭೀರವಾಗಿ ಗಾಯಗೊಂಡ ವ್ಯಕ್ತಿ.ಇಬ್ಬರು ಸೇಲ್ಸ್ ಮ್ಯಾನ್ ಕೆಲಸಗಾರರಾಗಿದ್ದು, ತನ್ನ ಖಾಸಗಿ ಕೆಲಸವನ್ನು ಮುಗಿಸಿ ಮನೆಗೆ ಜೊತೆಯಾಗಿ ಪ್ರಯಾಣಿಸುತ್ತಿದ್ದ ವೇಳೆ ಬಸ್ ಡಿಕ್ಕಿಯಾಗಿದೆ. ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ಮಂಗಳೂರಿನಿಂದ ಬಿಸಿರೋಡಿನ ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಬೈಕ್ ಸವಾರರಿಬ್ಬರಿಗೆ ಡಿಕ್ಕಿಯಾಗಿದೆ. ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ, ಗಂಭೀರವಾಗಿ ಗಾಯಗೊಂಡ ಇನ್ನೋರ್ವನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಖಾಸಗಿ ಬಸ್ ಚಾಲಕನ ಅತಿವೇಗದ ಮತ್ತು ಅಜಾಗರೂಕತೆಯ ಚಾಲನೆಯ ಪರಿಣಾಮ ಯುವಕ ಬಲಿಯಾಗಿದ್ದಾನೆ ಎಂದು ಹೇಳಲಾಗಿದ್ದು, ಬಸ್ ಚಾಲಕನ ಮೇಲೆ ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಟ್ರಾಫಿಕ್ ಎಸ್.ಐ.ಸುತೇಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

About The Author

Leave a Reply