ಮಂಗಳೂರು: ವಿಧಾನ ಪರಿಷತ್ ಶಾಸಕ ಹಾಗೂ ಕೆಪಿಸಿಸಿ ಕಾರ್ಯಧ್ಯಕ್ಷ ಮಂಜುನಾಥ ಭಂಡಾರಿ ಅವರು ಪಿಲಿಕುಳದಲ್ಲಿ ನಡೆಯಲಿರುವ ಪಿಲಿಕುಳ ಉತ್ಸವ ಮತ್ತು ಕಂಬಳದ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರ ಜೊತೆ ಸ್ಥಳ ಪರಿಶೀಲನೆಯನ್ನು ನಡೆಸಿ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಮೂಡಬಿದ್ರಿ ವಿಧಾನಸಭಾ ಕ್ಷೇತ್ರದ ಶಾಸಕ ಉಮಾನಾಥ್ ಕೋಟ್ಯಾನ್, ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ದೇವಿ ಪ್ರಸಾದ್ ಶೆಟ್ಟಿ, ಮಂಗಳೂರು ಮಹಾನಗರ ಪಾಲಿಕೆಯ ಕಮಿಷನರ್ ಅನಂದ್, ಆಯುಕ್ತರಾದ ರಶ್ಮಿ , ದಕ್ಷಿಣ ಕನ್ನಡ ಜಿಲ್ಲಾ RGPRS ಅಧ್ಯಕ್ಷರಾದ ಸುಭಾಷ್ಚಂದ್ರ ಶೆಟ್ಟಿ, ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷ ಲಾರೆನ್ಸ್ ಡಿಸೋಜ, ನವೀನ್ ಆಳ್ವ, ಸುನಿಲ್ ಪೂಜಾರಿ, ದಿಲ್ ರಾಜ್ ಆಳ್ವ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.