August 30, 2025
WhatsApp Image 2024-11-06 at 10.25.58 AM

ಬೆಂಗಳೂರು : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ಇವರ ವತಿಯಿಂದ 2024-25 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ಅರಿವು (ರಿನಿವಲ್) ಯೋಜನೆಯಡಿಯಲ್ಲಿ ನಿಗಮದಿಂದ ಸಾಲ ಸೌಲಭ್ಯಗಳನ್ನು ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

 

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು (ರಿನಿವಲ್) ವಿಧ್ಯಾಭ್ಯಾಸ ಯೋಜನೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಕೆಇಎ ವಯ ಸಿಇಟಿ, ನೀಟ್ ಮುಖಾಂತರ) ವೈದ್ಯಕೀಯ, ದಂತ ವೈದ್ಯಕೀಯ, ಎಂಜಿನಿಯರಿಂಗ್ ಆರ್ಕಿಟೆಕ್ಚರ್, ಆಯುಷ್, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶು ವೈದ್ಯಕೀಯ, ಎಂಬಿಎ, ಎಂಸಿಎ ಮತ್ತು ಎಲ್‌ಎಲ್ಬಿ ವ್ಯಾಸಂಗಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಾಲವನ್ನು ನೀಡಲಾಗುತ್ತದೆ. ವಿದ್ಯಾರ್ಥಿಗಳಿಗೆ “ಅರಿವು” (ರಿನಿವಲ್) ಯೋಜನೆಯಡಿ ಶೈಕ್ಷಣಿಕ ಸಾಲವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ನಿಗಮದ ವೆಬ್ ಸೈಟ್ https://kmdconline.karnataka.gov.in/ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಕಂಪ್ಯೂಟರ್ನಲ್ಲಿ ಭರ್ತಿ ಮಾಡಿದ ಕೂಡಲೇ ಅರ್ಜಿಯನ್ನು ಪ್ರಿಂಟೌಟ್ ಪಡೆದು ಕ್ಯೂಆರ್ ಕೋಡ್ ಹೊಂದಿದ ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಎಸ್‌ಎಸ್‌ಎಲ್ಸಿ ಅಂಕಪಟ್ಟಿ. ಪಿಯುಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಫೋಟೋ 04(ಪಾಸ್ ಪೋಟ್ ಸೈಜ್), ಸಿಇಟಿ, ನೀಟ್ ಹಾಲ್ ಟಿಕೆಟ್ ಪ್ರತಿಗಳು ಮತ್ತು ನೋಟರಿ ಮಾಡಿಸಿದ ಛಾಪ ಕಾಗದದಲ್ಲಿ Indemnity Bond ಈ ಎಲ್ಲಾ ದಾಖಲಾತಿಗಳನ್ನು “ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಮೌಲಾನಾ ಅಜಾದ್ ಭವನ, ಗ್ರಾಮಾಂತರ ಪೋಲೀಸ್ ಠಾಣೆ ಹತ್ತಿರ, ಎಫ್.ಎಂ.ಸಿ ಕಾಲೇಜು ರಸ್ತೆ, ಮಡಿಕೇರಿ ತಾ. ಕೊಡಗು ಜಿಲ್ಲೆ ಈ ಕಚೇರಿಗೆ ಸಲ್ಲಿಸಲು ಸೂಚಿಸಿದೆ”. ಹೆಚ್ಚಿನ ಮಾಹಿತಿ ಪಡೆಯಲು ಈ ಕಚೇರಿಯ ದೂ.ಸಂ.08272-201449 ಗೆ ಸಂಪರ್ಕಿಸಬಹುದು. “ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ನವೆಂಬರ್, 15 ರವರೆಗೆ ಅವಧಿ ವಿಸ್ತರಿಸಲಾಗಿದೆ” ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಕೃಷ್ಣಮೂರ್ತಿ ಅವರು ತಿಳಿಸಿದ್ದಾರೆ.

About The Author

Leave a Reply