ಬಂಟ್ವಾಳ: ಬಂಟ್ವಾಳ ತಾಲೂಕಿನ ಸಜೀಪ ಮುನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಂದಾವರದ 3ನೇ ವಾರ್ಡಿನ ತೆರವಾಗಿರುವ ಸ್ಥಾನಕ್ಕೆ ಮತದಾನ ನಡೆಯಲಿದ್ದು, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಪಕ್ಷದ ಬೆಂಬಲಿತ ಅಭ್ಯರ್ಥಿಯಾಗಿ ಹಕೀಂ ನಂದಾವರ ಅವರನ್ನು ಕೈಕಂಬ ಕ್ಷೇತ್ರ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಬಂಟ್ವಾಳ ಪುರಸಭೆಯ ಉಪಾಧ್ಯಕ್ಷರೂ, ಎಸ್ ಡಿ ಪಿ ಐ ದಕ್ಷಿಣ ಕನ್ನಡ ಜಿಲ್ಲಾ ಚುನಾವಣಾ ಉಸ್ತುವಾರಿಯೂ ಆದ ಮೂನಿಷ್ ಆಲಿ ಅವರು ಘೋಷಣೆ ಮಾಡಿದರು. ಈ ಸಂದರ್ಭದಲ್ಲಿ ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಶಾಹುಲ್ ಎಸ್ ಎಚ್, ಉಪಾಧ್ಯಕ್ಷರಾದ ಮುಷ್ತಾಕ್ ತಲಪಾಡಿ, ಕೋಶಾಧಿಕಾರಿಯಾದ ಯಾಸಿರ್ ಕಲ್ಲಡ್ಕ ಮತ್ತು ಕಲ್ಲಡ್ಕ ಬ್ಲಾಕ್ ಸಮಿತಿ ಅನ್ವರ್ ಆಲಡ್ಕ ಉಪಸ್ಥಿತರಿದ್ದರು.