ಮಂಗಳೂರು: ದನ ಕಳ್ಳತನ ಪ್ರಕರಣ- ಇಬ್ಬರ ಬಂಧನ…!!

ಮಂಗಳೂರು: ದನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.
ಕೊಳಂಬೆ ಕೊಂಚಾರು ಬದ್ರಿಯಾನಗರದ ಪೈಜಲ್ ಕೊಂಚಾರ್ (40) ಮತ್ತು ಕೋಡಿಯ ಸುಹೈಬ್ ಅಕ್ತರ್ (24) ಎಂಬವರನ್ನು ಬಂಧಿಸಿ, ಆರೋಪಿಗಳಿಂದ ಕಾರು ಹಾಗೂ ಸ್ಕೂಟರ್‌ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳ ಪೈಕಿ ಪೈಜಲ್ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ 1 ಮತ್ತು ಶಿವಮೊಗ್ಗ ಜಿಲ್ಲೆಯ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ 2 ಪ್ರಕರಣಗಳು ದಾಖಲಾಗಿರುವುದು ಪೊಲೀಸ್ ತನಿಖೆಯಿಂದ ಬೆಳಕಿಗೆ ಬಂದಿದೆ.
ಈ ಹಿಂದೆ ಪೈಜಲ್ ವಿರುದ್ಧ ಒಟ್ಟು 12 ದನ ಕಳ್ಳತನ ಪ್ರಕರಣ ದಾಖಲಾಗಿದ್ದು ಅದರಲ್ಲಿ ಬಜ್ಜೆ ಪೊಲೀಸ್ ಠಾಣೆಯಲ್ಲಿ 7 ಪ್ರಕರಣಗಳು, ಉಡುಪಿಯ ಶಂಕರ ನಾರಾಯಣ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ ಮತ್ತು ಶಿರಸಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ 2 ಪ್ರಕರಣಗಳು ದಾಖಲಾಗಿವೆ.
ಸುಹೈಬ್ ಅಕ್ತರ್ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದನ ಕಳ್ಳತನದ ಒಂದು ಪ್ರಕರಣ ದಾಖಲಾಗಿದೆ.
ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ಶ್ರೀಕಾಂತ್ ಕೆ ನಿರ್ದೇಶನದಲ್ಲಿ ಕಾವೂರು ಪೊಲೀಸ್ ಠಾಣೆಯ ನಿರೀಕ್ಷಕ ರಾಘವೇಂದ್ರ ಬೈಂದೂರು ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಉಪನಿರೀಕ್ಷಕರಾದ ಮಲ್ಲಿಕಾರ್ಜುನ ಬಿರಾದಾರ, ಸಿಬ್ಬಂದಿ ಭುವನೇಶ್ವರಿ, ರಿಯಾಜ್, ಚಂದ್ರ ನಾಯಕ್, ನಾಗರಾಜ ಭೈರಗೊಂಡ, ರಾಜಪ್ಪ ಭಾಗವಹಿಸಿದ್ದರು.

Leave a Reply