
ಮಾನಸಿಕ ಆರೋಗ್ಯವನ್ನು ಸುರಕ್ಷಿತವಾಗಿಡುವ ಉದ್ದೇಶದಿಂದ 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಆಸ್ಟ್ರೇಲಿಯಾದಲ್ಲಿ ಸಾಮಾಜಿಕ ಮಾಧ್ಯಮ ಬಳಸಲು ಅನುಮತಿ ನೀಡಲಾಗುವುದಿಲ್ಲ ಎಂದು ಪ್ರಧಾನಿ ಆಂಥೋನಿ ಅಲ್ಬನೀಸ್ ಘೋಷಣೆ ಮಾಡಿದ್ದಾರೆ. ಮಕ್ಕಳು ಸೋಶಿಯಲ್ ಮೀಡಿಯಾ ಬಳಸಿದರೆ ಅದಕ್ಕೆ ಆಯಾ ಕಂಪನಿಗಳೇ ನೇರ ಹೊಣೆ. ಇಲ್ಲಿ ಪಾಲಕರನ್ನು, ಯುವಕರನ್ನು ನಾವು ಹೊಣೆ ಮಾಡುತ್ತಿಲ್ಲ. ಮಕ್ಕಳ ಸೋಶಿಯಲ್ ಮೀಡಿಯಾ ಪ್ರವೇಶವನ್ನು ತಡೆಗಟ್ಟಲು ಸೋಶಿಯಲ್ ಮೀಡಿಯಾ ವೇದಿಕೆಗಳು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಸಾಮಾಜಿಕ ಮಾಧ್ಯಮಗಳು ನಮ್ಮ ಮಕ್ಕಳಿಗೆ ಹಾನಿ ಮಾಡುತ್ತಿವೆ. 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿವೆ ಅನ್ನೋದು ಅನೇಕ ಸಂಶೋಧನೆಯಿಂದ ದೃಢಪಟ್ಟಿದೆ ಎಂದು ತಿಳಿಸಿದ್ದಾರೆ. ನಿಯಮ ಉಲ್ಲಂಘಿಸಿದ್ರೆ ಭಾರೀ ಪ್ರಮಾಣದಲ್ಲಿ ಕಂಪನಿಗಳು ದಂಡ ಕಟ್ಟಬೇಕಾಗುತ್ತದೆ. ಶೀಘ್ರದಲ್ಲೇ ಸಂಸತ್ತಿನಲ್ಲಿ ಮಸೂದೆಯನ್ನು ಮಂಡಿಸಲಾಗುವುದು ಎಂದು ಪ್ರಧಾನಿ ಹೇಳಿದ್ದಾರೆ. ಫ್ರಾನ್ಸ್‌ನಲ್ಲಿ 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಸಾಮಾಜಿಕ ಮಾಧ್ಯಮ ಬಳಕೆದಾರರು ಪೋಷಕರ ಅನುಮತಿಯನ್ನು ತೆಗೆದುಕೊಳ್ಳಬೇಕಾಗುತ್ತದೆ. ಕೆಲವು ದೇಶಗಳಲ್ಲಿ 13 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ TikTok ಮತ್ತು Instagram ನಂತಹ ಪ್ಲಾಟ್‌ಫಾರ್ಮ್‌ಗಳನ್ನು ಬಳಸಲು ರೂಲ್ಸ್ ಮಾಡಲಾಗಿದೆ.


