
ಕಾರ್ಕಳ : ಗೋಮಟೇಶ್ವರ ಬೆಟ್ಟದ ಬಳಿ ಓಮ್ನಿ ಹಾಗೂ ಕಾರು ನಡುವೆ ಅಪಘಾತವಾಗಿ ಓಮ್ನಿ ಚಾಲಕ ಗಾಯಗೊಂಡಿರುವ ಘಟನೆ ಇಂದು ಸಂಭವಿಸಿದೆ. ಜೋಡುಕಟ್ಟೆಯಿಂದ ಕಾರ್ಕಳ ಕಡೆಗೆ ಸಾಗುತ್ತಿದ್ದ ಓಮ್ನಿ ಮತ್ತು ಕಾರ್ಕಳ ಕಡೆಯಿಂದ ಬರುತ್ತಿದ್ದ ಕಾರು ಡಿಕ್ಕಿಯಾಗಿದೆ.



ಪರಿಣಾಮವಾಗಿ ಓಮ್ನಿ ಸಂಪೂರ್ಣವಾಗಿ ಜಖಂಗೊಂಡಿದ್ದು ಒಳಗಡೆ ಲಾಕ್ ಆಗಿದ್ದ ಕಾರಣ ಗಾಯಾಳು ಚಾಲಕ ಹೊರಬರಲು ಸಾಧ್ಯವಾಗುತ್ತಿರಲಿಲ್ಲ.
ತಕ್ಷಣವೇ ಸ್ಥಳೀಯರು ಜಮಾಯಿಸಿದ್ದು ಕಾರ್ಕಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿ ಪೊಲೀಸರು ಓಮ್ನಿ ಡೋರ್ ಓಪನ್ ಮಾಡಲು ಸಾಧ್ಯವಾಗದೆ ಇದ್ದಾಗ ಕಾರ್ಕಳ ಅಗ್ನಿಶಾಮಕದವರನ್ನು ಕರೆಯಿಸಿ ಬೋಲ್ಟ್ ಕಟರ್ ಮೂಲಕ ಡೋರ್ ಓಪನ್ ಮಾಡಿ ಗಾಯಾಳುವನ್ನು ಕಾರ್ಕಳ ಸರಕಾರಿ ಆಸ್ಪತ್ರೆಗೆ ಸಾಗಿಸಿದರು. ಗಾಯಾಳುವನ್ನು ಮೂಡುಬಿದಿರೆಯ ಒಂಟಿಕಟ್ಟೆ ನಿವಾಸಿ ಸಂದೇಶ್ (35) ಎಂದು ಗುರುತಿಸಲಾಗಿದೆ.