November 8, 2025
WhatsApp Image 2024-11-10 at 3.22.53 PM

ಮಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ನಂತರ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಅದರಲ್ಲಿ ಮಹಿಳೆಯರಿಗೆ ಪ್ರಮುಖವಾದಂತಹದ್ದು ಗೃಹಲಕ್ಷ್ಮಿ ಯೋಜನೆ. ಈಗಾಗಲೇ ಈ ಯೋಜನೆಯಿಂದ ರಾಜ್ಯದ ಹಲವು ಮಹಿಳೆಯರು ಸದುಪಯೋಗ ಪಡೆದುಕೊಂಡಿದ್ದು, ಇದೀಗ ಮಂಗಳೂರಿನಲ್ಲಿ ಪತಿಗೆ ಪತ್ನಿಯೊಬ್ಬರು ಗೃಹಲಕ್ಷ್ಮಿ ಯೋಜನೆಯಿಂದ ಬಂದಂತಹ ಹಣದಿಂದ ಸ್ಕೂಟಿ ಗಿಫ್ಟ್ ಕೊಟ್ಟಿದ್ದಾರೆ.

 

ಹೌದು ಮಂಗಳೂರಿನ ಕೋಡಿಂಬಾಡಿ ಸಮೀಪದ ಶಾಂತಿನಗರ ನಿವಾಸಿ ಮಿಸ್ತ್ರಿಯಾ ಎಂಬವರು ತನ್ನ ಬ್ಯಾಂಕ್ ಖಾತೆಗೆ ಜಮೆಯಾಗಿರುವ ಗೃಹಲಕ್ಷ್ಮಿ ಹಣದಿಂದ ಪತಿ ಸಲೀಂಗಾಗಿ ಸ್ಕೂಟರ್ ಖರೀದಿಸಿದ್ದಾರೆ. ಪೈಂಟರ್ ಆಗಿರುವ ಸಲೀಂ ನಿತ್ಯ ದೂರದ ಊರುಗಳಿಗೆ ಪೈಂಟಿಂಗ್ ಕೆಲಸಕ್ಕೆ ಹೋಗುತ್ತಿದ್ದರು. ಹೀಗಾಗಿ ಪತಿ ಕೆಲಸಕ್ಕೆ ತೆರಳಲು ಪತ್ನಿ ಮಿಸ್ತ್ರಿಯಾರ ಗೃಹಲಕ್ಷ್ಮಿ ಹಣದಿಂದ ಸ್ಕೂಟರ್ ಕೊಡಿಸಿದ್ದಾರೆ.

ಇದೆ ಸಂದರ್ಭದಲ್ಲಿ ಹೊಸ ಸ್ಕೂಟಿಯೊಂದಿಗೆ ಸಲೀಂ ತನ್ನ ಪತ್ನಿ ನೀಡಿದ ಸ್ಕೂಟರ್‌ನೊಂದಿಗೆ ಶಾಸಕರನ್ನು ಭೇಟಿಯಾದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರದ ಗೃಹಲಕ್ಷ್ಮೀ ಹಣದಿಂದ ತನ್ನ ಬಾಳು ಬೆಳಗಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಶಾಸಕರು ಸಲೀಂರನ್ನು ಸನ್ಮಾನಿಸಿ ಗೌರವಿಸಿದರು.

About The Author

Leave a Reply