November 8, 2025
kadar

ಉಳ್ಳಾಲ: ತೊಕ್ಕೊಟ್ಟು ಚೆಂಬುಗುಡ್ಡೆ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದು, ರಸ್ತೆ ದುರಸ್ತಿಗೆ ಅಧಿಕಾರಿಗಳ ನಿರ್ಲಕ್ಷ್ಯತನ ಎದ್ದು ಕಂಡಿದೆ. ಆದ್ದರಿಂದ ಅಪಘಾತದ ಕುರಿತು ತನಿಖೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಲೋಕೋಪಯೋಗಿ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಯು.ಟಿ.ಖಾದರ್ ಅವರು ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆಯುವ ಕಾಮನ್‌ವೆಲ್ತ್ ಪಾರ್ಲೆಮೆಂಟರಿ ಅಸೋಸಿಯೇಷನ್ ಸಮಾವೇಶದಲ್ಲಿದ್ದು, ಮಹಿಳೆ ಮೃತಪಟ್ಟ ಮಾಹಿತಿ ಪಡೆದ ಅವರು ತೀವ್ರ ಸಂತಾಪ ವ್ಯಕ್ತಪಡಿಸಿ ಮೃತರ ಕುಟುಂಬಕ್ಕೆ ಸಾಂತ್ವನ ತಿಳಿಸಿದ್ದಾರೆ. ರಸ್ತೆ ಅಭಿವೃದ್ಧಿಗೆ ಜನರಿಂದ ಬೇಡಿಕೆ ಬರುವ ಮೊದಲೇ ಸಭಾಧ್ಯಕ್ಷ ಯು ಟಿ ಖಾದರ್ ಸರಕಾರದಿಂದ 30 ಕೋಟಿ ರೂ. ಅನುದಾನ ಬಿಡುಗಡೆಗೊಳಿಸಿದ್ದು ಟೆಂಡರ್ ಪ್ರಕ್ರಿಯೆ ಕೂಡಾ ಮುಗಿದಿದೆ. ಮಳೆಯ ಕಾರಣದಿಂದಾಗಿ ಕಾಮಗಾರಿ ಪ್ರಾರಂಭವಾಗಲು ವಿಳಂಬವಾಗಿತ್ತು. ಪ್ರತೀ ಮಳೆಗಾಲದ ಬಳಿಕ ರಸ್ತೆಗಳ ಗುಂಡಿಗಳು ಸರಿಪಡಿಸುವುದು ಸಂಬಧಪಟ್ಟ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಕರ್ತವ್ಯ, ರಸ್ತೆ ಗುಂಡಿಗಳ ಬಗ್ಗೆ ಮಾಧ್ಯಮದಲ್ಲಿ ಬಂದ ವರದಿಯನ್ನು ಆಧರಿಸಿ ಈ ಘಟನೆ ಸಂಭವಿಸುವ ಕೆಲವೇ ಗಂಟೆಗಳ ಮೊದಲು ರಸ್ತೆ ದುರಸ್ತಿಗೊಳಿಸುವಂತೆ ಅಧಿಕಾರಿಗಳಿಗೆ ಸಭಾಧ್ಯಕ್ಷ ಯು ಟಿ ಖಾದರ್ ಸೂಚನೆಯನ್ನೂ ನೀಡಿದ್ದರು.

About The Author

Leave a Reply