ಮಂಗಳೂರು : ಮಗುವಿನ ಜೊತೆ ಫಲ್ಗುಣಿ ನದಿಗೆ ಹಾರಿ ತಂದೆ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ ಸ್ಥಳೀಯರು ತಂದೆ ಹಾಗೂ ಎರಡು ವರ್ಷದ ಮಗುವನ್ನು ರಕ್ಷಣೆ ಮಾಡದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಗುರುಪುರ ಎಂಬಲ್ಲಿ ಒಂದು ಘಟನೆ ನಡೆದಿದೆ.
ಹೌದು ಮಗುವಿನ ಜೊತೆಗೆ ನದಿಗೆ ಹಾರಿ ತಂದೆ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮಂಗಳೂರು ಹೊರವಲಯದ ಗುರುಪುರದಲ್ಲಿ ಈ ಒಂದು ಘಟನೆ ನಡೆದಿದೆ. ಹಾರುವ ಮೊದಲೇ ಸ್ಥಳೀಯರು ಇಬ್ಬರನ್ನು ರಕ್ಷಿಸಿದ್ದಾರೆ. ಕೈಕಂಬ ನಿವಾಸಿ ಸಂದೀಪ್ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಎಂದು ತಿಳಿದು ಬಂದಿದೆ. ಎರಡು ವರ್ಷದ ಮಗುವಿನ ಜೊತೆಗೆ ಹಾರಲು ಯತ್ನಿಸಿದ್ದಾನೆ.ಕೂಡಲೇ ಸ್ಥಳೀಯರು ನೋಡಿ ತಂದೆ ಹಾಗೂ ಮಗುವನ್ನು ರಕ್ಷಿಸಿದ್ದಾರೆ.
ತಂದೆ ಹಾಗೂ ಮಗನು ರಕ್ಷಿಸಿದ ಸ್ಥಳೀಯರು, ಬಳಿಕ ಸಂದೀಪ್ ಗೆ ಬುದ್ಧಿವಾದ ಹೇಳಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಸಂದೀಪ್ ತನ್ನ ಎರಡು ವರ್ಷದ ಮಗುವನ್ನು ಕರೆದುಕೊಂಡು ಫಲ್ಗುಣಿ ನದಿ ಬಳಿ ಬಂದು ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ, ಘಟನೆ ಕುರಿತಂತೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.