ಬಂಟ್ವಾಳ: ಪ್ರೇಯಸಿಯ ಮನೆಗೆ ಬಂದ ಯುವಕನಿಗೆ ಕಂಬಕ್ಕೆ ಕಟ್ಟಿಹಾಕಿಮಾರಣಾಂತಿಕ ಹಲ್ಲೆ..! ಗಾಯಗೊಂಡ ಮಹಮ್ಮದ್ ಮುಸ್ತಾಪ ಆಸ್ಪತ್ರೆಗೆ ದಾಖಲು

ಬಂಟ್ವಾಳ: ರಾತ್ರಿ ವೇಳೆ ಪ್ರೇಯಸಿಯ ಮನೆಗೆ ಬಂದ ಯುವಕನಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಬಂಟ್ವಾಳದ ಸಜೀಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ನಡೆದಿದೆ.

ಹಲ್ಲೆಯಿಂದ ತೀವ್ರ ಗಾಯಗೊಂಡ ಮಹಮ್ಮದ್ ಮುಸ್ತಾಪ(21)ನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಸ್ತಾಪನ ಸಂಬಂಧಿ ಹುಡುಗಿಯೊಬ್ಬಳು ಸಜೀಪನಡು ಗ್ರಾಮದ ಕಂಚಿನಡ್ಕಪದವಿನಲ್ಲಿರುವ ಮನೆಗೆ ಬರಲು ಹೇಳಿದಂತೆ ಸಜೀಪನಡು ಕಂಚಿನಡ್ಕಪದವು ಎಂಬಲ್ಲಿಗೆ ಬಂದಾಗ ಆರೋಪಿಗಳು ಮಹಮ್ಮದ್ ಮುಸ್ತಾಫನ ಬಗ್ಗೆ ಸಂಶಯಗೊಂಡವರು ಗುಂಪು ಸೇರಿಕೊಂಡು ಕಂಬಕ್ಕೆ ಹಗ್ಗದಿಂದ ಕಟ್ಟಿಹಾಕಿ ಹಲ್ಲೆ ನಡೆಸಿದ್ದು, ಘಟನೆ ಸಂಬಂಧ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕಂಬಕ್ಕೆ ಕಟ್ಟಿ ಹಾಕಿ ರಕ್ತ ಚಿಮ್ಮುವಂತೆ ಯುವಕರ ತಂಡವು ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಿದ್ದಾರೆಂದು ತಿಳಿದುಬಂದಿದೆ.ಈ ಘಟನೆ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಗಳಾದ ಮಹಮ್ಮದ್ ಸಪ್ಪಾನ್ ,ಮಹಮ್ಮದ್ ರಿಜ್ವಾನ್, ಇರ್ಪಾನ್, ಅನೀಸ್ ಅಹಮ್ಮದ್, ನಾಸೀರ್‌ ,ಶಾಕೀರ್‌ ಬಂಧಿಸಲಾಗಿದ್ದು. ಕೊಲೆಯತ್ನ ಪ್ರಕರಣ ದಾಖಲಾಗಿಸಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Leave a Reply