
ಕೋಸ್ಟಲ್ ವುಡ್ ನಲ್ಲಿ ಶೀರ್ಷಿಕೆಯಿಂದಲೇ ಗಮನ ಸೆಳೆದಿರುವ 90 ಎಮ್ ಎಲ್ ಸಿನಿಮಾದ ಚಿತ್ರೀಕರಣದ ಕೆಲಸವು ಭರದಿಂದ ಸಾಗುತ್ತಿದೆ. ಡಿ ಡಿ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಿಸಲಾಗುತ್ತಿರುವ ಈ ಸಿನಿಮಾದ ಒಟ್ಟು ಕಥಾಹಂದರವು ಉತ್ತಮ ಸಂದೇಶ, ಕೌಟುಂಬಿಕ ಮನೋರಂಜನೆ, ಪ್ರೀತಿ ಪ್ರೇಮ, ಸುಂದರ ಹಾಡುಗಳು, ಹಾಸ್ಯದೊಂದಿಗೆ ಸಾಕಷ್ಟು ಅಚ್ಚರಿಗಳನ್ನು ಕೂಡಾ ಒಳಗೊಂಡಿದೆ.



ಡೋಲ್ಪಿ ಡಿ ಸೋಜ ನಿರ್ಮಾಪಕರಾಗಿರುವ, ರಂಜಿತ್ ಸಿ ಬಜಾಲ್ ನಿರ್ದೇಶಿಸುತ್ತಿರುವ ಈ ಚಿತ್ರದಲ್ಲಿ ವಿನೀತ್ ಕುಮಾರ್ ನಾಯಕ ನಟನಾಗಿ ನಟಿಸುತ್ತಿದ್ದು, ನಾಯಕಿಯಾಗಿ ರುಹಾನಿ ಶೆಟ್ಟಿ ನಟಿಸುತ್ತಿದ್ದಾರೆ. 90 ಎಮ್ ಎಲ್ ಸಿನಿಮಾದಲ್ಲಿ ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ರೋಶನ್ ಶೆಟ್ಟಿ, ದೀಪಕ್ ರೈ ಪಾಣಾಜೆ, ಉಮೇಶ್ ಮಿಜಾರ್, ಪುಷ್ಪರಾಜ್ ಬೊಳ್ಳೂರು, ಶೈಲಶ್ರೀ, ನಮಿತಾ ಸೇರಿದಂತೆ ಹಲವಾರು ಪ್ರಭುದ್ಧ ಕಲಾವಿದರು ವಿಭಿನ್ನ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.
ನವೆಂಬರ್ 1 ರಂದು ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಈ ತುಳು ಚಲನಚಿತ್ರದ ಮುಹೂರ್ತ ಸಮಾರಂಭವು ನಡೆಯಿತು. ಒಟ್ಟು 20 ರಿಂದ 25 ದಿನಗಳ ಕಾಲ ಚಿತ್ರೀಕರಣ ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುತ್ತ ಮುತ್ತ ಇರುವಂತಹ ಹಲವಾರು ಸುಂದರ ಸ್ಥಳಗಳಲ್ಲಿ ಒಂದೇ ಹಂತದಲ್ಲಿ ಚಿತ್ರೀಕರಣ ನಡೆಯಲಿದೆಯಾಗಿದೆ. ಒಂದು ಸಿಂಪಲ್ ಕಥೆಯನ್ನು ವಿಭಿನ್ನ ರೀತಿಯಲ್ಲಿ ಪ್ರಸ್ತುತಪಡಿಸುವುದು ಚಿತ್ರತಂಡದ ಗುರಿಯಾಗಿದೆ. ಚಿತ್ರ ಬಹಳ ಸುಂದರವಾಗಿ ಮೂಡಿಬರುತ್ತಿದ್ದು ಚಿತ್ರತಂಡಕ್ಕೆ ಹೊಸ ಭರವಸೆಯನ್ನು ಮೂಡಿಸಿದೆ. ಮಾತ್ರವಲ್ಲದೇ ಈ ಚಲನಚಿತ್ರವು ತುಳು ಚಿತ್ರ ಪ್ರೇಮಿಗಳ ಮೆಚ್ಚುಗೆಗೆ ಪಾತ್ರವಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂಬ ನಂಬಿಕೆ ಚಿತ್ರ ತಂಡದ್ದಾಗಿದೆ.
ಚಿತ್ರಕತೆ-ನಿರ್ದೇಶನ ರಂಜಿತ್ ಸಿ ಬಜಾಲ್, ಸಂಭಾಷಣೆ ತುಳಸಿದಾಸ್ ಮಂಜೇಶ್ವರ್, ಛಾಯಾಗ್ರಾಹಣ ಅರ್ಜುನ್ ಎಂವಿ, ಸಂಗೀತ ಸೃಜನ್ ಕುಮಾರ್ ತೋನ್ಸೆ, ಸಂಕಲನ ವಿಶಾಲ್ ದೇವಾಡಿಗ, ಡಿಸೈನ್ ಆಚಾರ್ಯ ಗುರು ಸೇರಿದಂತೆ ಹಲವು ಸೃಜನಶೀಲ ವ್ಯಕ್ತಿಗಳ ದಂಡನ್ನೇ ಹೊಂದಿದೆ ಈ ಚಿತ್ರತಂಡ. ಕೆಲವೇ ಕೆಲವು ತಿಂಗಳುಗಳಲ್ಲಿ ಈ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ಪ್ಲಾನ್ ಮಾಡಿದೆಯಾಗಿದೆ.
ವರದಿ : ಧನುಷ್ ಶಕ್ತಿನಗರ