
ಉಳ್ಳಾಲ: ವಿಷಮ ಜ್ವರ ಉಳ್ಳಾಲದಲ್ಲಿ ಯುವಕನನ್ನೇ ಬಲಿ ಪಡೆದಿದ್ದು ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ .



ಉಳ್ಳಾಲ ನಗರಸಭಾ ವ್ಯಾಪ್ತಿಯ ಅಕ್ಕರೆಕೆರೆ ನಿವಾಸಿ ಅಬ್ದುಲ್ ಅಝೀಝ್ ಉಸ್ತಾದ್ ಹಾಗೂ ಜಮೀಲಾ ದಂಪತಿಯ ಪುತ್ರ ಮುಝೈನ್(22) ಮೃತಪಟ್ಟ ಯುವಕನಾಗಿದ್ದಾನೆ. ಜ್ವರದಿಂದ ಬಳಲುತ್ತಿದ್ದ ಮುಝೈನ್ ರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ. ಮೃತರು ತಂದೆ, ತಾಯಿ, ಮೂವರು ಸಹೋದರರು, ಓರ್ವ ಸಹೋದರಿ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.