
ಪುತ್ತೂರು : ಉಪ್ಪಿನಂಗಡಿಯ ಸನ್ಮಾನ್ ಹೊಟೇಲ್ ಮಾಲಕ, ಸಮಾಜ ಸೇವಕ ಆದಂ ಹಾಜಿ ಸನ್ಮಾನ್ ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು.



ಮೃತ ಹಾಜಿ ಅವರು ಪತ್ನಿ, ಇಬ್ಬರು ಪುತ್ರರು, ಮೂವರು ಪುತ್ರಿಯರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ವಿವಿಧ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ಆದಂ ಹಾಜಿಯವರು ಉಪ್ಪಿನಂಗಡಿ ಪರಿಸರದಲ್ಲಿ ಜನಾನುರಾಗಿಯಾಗಿದ್ದರು. ಮೃತರ ಅಂತ್ಯಕ್ರಿಯೆ ಶುಕ್ರವಾರ ಬೆಳಗ್ಗೆ 10 ಗಂಟೆಗೆ ಉಪ್ಪಿನಂಗಡಿಯ ಮಾಲಿಕುದ್ದೀನಾರ್ ಮಸೀದಿಯ ವಠಾರದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಆದಂ ಅಕಾಲಿಕ ನಿಧನಕ್ಕೆ ಅನೇಗ ಗಣ್ಯರು ಕಂಬನಿ ಮಿಡಿದಿದ್ದಾರೆ.