August 30, 2025
WhatsApp Image 2024-11-17 at 9.35.37 AM

ಪಾಟ್ನಾ: ಇಲ್ಲಿನ ನಳಂದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಶನಿವಾರ (ನ.16) ವ್ಯಕ್ತಿಯೊಬ್ಬ ಮೃತಪಟ್ಟ ಕೆಲವೇ ಗಂಟೆಗಳಲ್ಲಿ ಕಣ್ಣು ಕಾಣೆಯಾಗಿದೆ.

ಈ ಪ್ರಕರಣದಲ್ಲಿ ವೈದ್ಯಕೀಯ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿ ಮೃತನ ಕುಟುಂಬದವರು ಆಸ್ಪತ್ರೆ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಆದರೆ, ಆತನ ಕಣ್ಣಿಗೆ ಇಲಿ ಕಚ್ಚಿದೆ ಎಂದು ಆಸ್ಪತ್ರೆ ಸಿಬ್ಬಂದಿ ಹೇಳಿಕೊಂಡಿದ್ದಾರೆ.

ಪೊಲೀಸರ ಪ್ರಕಾರ, ನ. 14 ರಂದು ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿದ ನಂತರ ಫಂತುಷ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನ. 15 ರಂದು ಅವರನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಯಿತು, ಬಳಿಕ ಅವರನ್ನು ಐಸಿಯುಗೆ ಸ್ಥಳಾಂತರಿಸಲಾಯಿತು. ಆದರೆ ಫಂತುಷ್ ಶುಕ್ರವಾರ ರಾತ್ರಿ ನಿಧನರಾದರು, ಆದರೆ ರಾತ್ರಿಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲು ಸಾಧ್ಯವಾಗದ ಕಾರಣ ಅವರ ದೇಹವನ್ನು ಐಸಿಯು ಹಾಸಿಗೆಯ ಮೇಲೆ ಇರಿಸಲಾಗಿತ್ತು.

ಶನಿವಾರ ಬೆಳಿಗ್ಗೆ, ಅವರ ಎಡಗಣ್ಣು ಕಾಣೆಯಾಗಿದೆ ಎಂದು ಅವರ ಕುಟುಂಬವು ಹೇಳಿದೆ. ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಹೀಗಾಗಿದೆ ಎಂದು ಆರೋಪಿಸಲಾಗಿದೆ. ಸಂಬಂಧಿಯೊಬ್ಬರು ಮೇಜಿನ ಬಳಿ ಸರ್ಜಿಕಲ್ ಬ್ಲೇಡ್ ಕಂಡುಬಂದಿದೆ ಎಂದು ಆರೋಪಿಸಿದರು.

ಪ್ರಕರಣದ ತನಿಖೆಗೆ ನಾಲ್ವರು ಸದಸ್ಯರ ತಂಡವನ್ನು ರಚಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ನಳಂದ ಆಸ್ಪತ್ರೆಯ ಅಧೀಕ್ಷಕ ಡಾ.ವಿನೋದ್ ಕುಮಾರ್ ತಿಳಿಸಿದ್ದಾರೆ.

“ಯಾರಾದರೂ ಕಣ್ಣು ತೆಗೆದಿರಬಹುದು ಅಥವಾ ಇಲಿ ಕಣ್ಣಿಗೆ ಕಚ್ಚಿದೆ. ಎರಡೂ ಸಂದರ್ಭಗಳಲ್ಲಿ ನಮ್ಮದೇ ತಪ್ಪು, ತನಿಖೆಯ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು” ಎಂದು ಅವರು ಹೇಳಿದರು.

About The Author

Leave a Reply