
ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ.



ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ಹೇರ್ ಡ್ರೈರ್ ಸ್ಪೋಟಗೊಂಡು ಮಹಿಳೆಯ 2 ಕೈಗಳು ಛಿದ್ರವಾಗಿರುವ ಘಟನೆ ನಡೆದಿದೆ. ಮಹಿಳೆಯೊಬ್ಬರು ಹೇರ್ ಡ್ರೈಯರ್ ಬಳಸುವಾಗ ಇದ್ದಕ್ಕಿದ್ದಂತೆ ಬ್ಲಾಸ್ಟ್ ಆಗಿದೆ.
ಪರಿಣಾಮ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಸದ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಕೋರಿಯರ್ ಓಪನ್ ಮಾಡಿ ಹೇರ್ ಡ್ರೈಯರ್ ಸ್ವೀಚ್ ಆನ್ ಮಾಡಿದ ತಕ್ಷಣ ಬ್ಲಾಸ್ಟ್ ಆಗಿದ್ದು, ಇಳಕಲ್ ನಗರದ ಬಸಮ್ಮ ಎಂಬ ಮಹಿಳೆಯ ಎರಡೂ ಕೈಗಳು ಛಿದ್ರವಾಗಿದೆ. ಸದ್ಯ ಬಸಮ್ಮಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಳಕಲ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.