ವಿಟ್ಲ: ಕನ್ಯಾನ ಪಂಜಾಜೆ ಮನೆಯೊಂದರಲ್ಲಿ ವ್ಯಕ್ತಿಯ ಶವ ಪತ್ತೆ..!

ವಿಟ್ಲ: ಮನೆಯೊಂದರಲ್ಲಿ ವ್ಯಕ್ತಿಯೋರ್ವರ ಶವ ಪತ್ತೆಯಾದ ಘಟನೆ ವಿಟ್ಲದ ಕನ್ಯಾನದ ಪಂಜಾಜೆ ಎಂಬಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿ ಮನೆಯಲ್ಲಿ ಒಬ್ಬರೇ ವಾಸವಾಗಿದ್ದ ಮೌರಿಸ್ ಡಿಸೋಜಾ(61) ಎಂದು ಗುರುತಿಸಲಾಗಿದೆ. ಮೌರಿಸ್ ರವರು ಮನೆಯಲ್ಲಿ ಒಬ್ಬರೇ ವಾಸವಿದ್ದು, ಕೆಲಸದವರು ಮೃತಪಟ್ಟಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಎರಡು ದಿನಗಳ ಹಿಂದೆಯೇ ಮೃತಪಟ್ಟಿದ್ದು ವಿಟ್ಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಸಾವಿನ ಕಾರಣದ ಬಗ್ಗೆ ತನಿಖೆ ನಡೆಸುತ್ತಿದ್ದು ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

Leave a Reply