
ಕಡಬ: ರಾಮಕುಂಜದ ಖಾಸಗಿ ಕಾಲೇಜಿನ ಉಪನ್ಯಾಸಕನೋರ್ವ ವಿದ್ಯಾರ್ಥಿಗಳಿಗೆ ಹಿಗ್ಗಾಮುಗ್ಗ ಥಳಿಸಿದ್ದು ಓರ್ವ ಕಡಬ ಸಮುದಾಯ ಆಸ್ಪತ್ರೆಗೆ ದಾಖಲಾದ ಘಟನೆ ನ.20 ರಂದು ನಡೆದಿದೆ.



ವಿದ್ಯಾರ್ಥಿಗಳಿಬ್ಬರು ಕಾಲೇಜಿಗೆ ಬೈಕ್ ತಂದ ವಿಚಾರದಲ್ಲಿ ಉಪನ್ಯಾಸಕನೊಬ್ಬ ಪ್ರಶ್ನಿಸಿ ಬುಧವಾರ ದಿನ ಮುಂಜಾನೆ ವೇಳೆ ಹೊಡೆದಿರುವುದಾಗಿ ಆರೋಪಿಸಲಾಗಿದೆ.
ರಾಮಕುಂಜದ ದ್ವಿತೀಯ ಪಿಯುಸಿ ವಿದ್ಯಾರ್ಥಿ ಕವನ್ ಎಂಬವರು ಕಡಬ ಸಮುದಾಯ ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿ. ವಿದ್ಯಾರ್ಥಿಯ ಹೇಳಿಕೆ ಪ್ರಕಾರ ಎಂಟು ವಿದ್ಯಾರ್ಥಿಗಳಿಗೆ ಹೊಡೆದಿರುವುದಾಗಿ ಆರೋಪ ವ್ಯಕ್ತಪಡಿಸಿದ್ದಾರೆ.
ತಡ ರಾತ್ರಿ ಕಡಬ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳುವ ಸಂದರ್ಭದಲ್ಲಿ ಉಪನ್ಯಾಸಕನೂ ಆಗಮಿಸಿದ್ದು , ಸ್ಥಳದಲ್ಲಿದ್ದ ಯುವಕರ ಗುಂಫು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯೊಳಗೆ ಕೆಲ ಹೊತ್ತು ಭಾರಿ ಮಾತಿನ ಚಕಮಕಿ ನಡೆದಿತ್ತು.ಬಳಿಕ ಆಸ್ಪತ್ರೆ ಸಿಬ್ಬಂದಿಗಳು ಯುವಕರಿಗೆ ಆಸ್ಪತ್ರೆಯಿಂದ ಹೊರ ಹೋಗುವಂತೆ ಸೂಚಿಸಿದ್ದರು.