October 13, 2025
WhatsApp Image 2024-11-21 at 2.10.49 PM

ಪುತ್ತೂರು: ಶಾಲಾ ವಾಹನಕ್ಕೆ ಡಿಕ್ಕಿ ಹೊಡೆಯುದನ್ನು ತಪ್ಪಿಸಲು ಹೋಗಿ ಮದುವೆಗೆ ತೆರಳುತ್ತಿದ್ದ ಬಸ್ಸೊಂದು ರಸ್ತೆ ಅಂಚಿನಲ್ಲಿದ್ದ ಮನೆಗೆ ನುಗ್ಗಿದ ಘಟನೆ ಕಾವು ಸಮೀಪದ ಅಮ್ಚಿನಡ್ಕ ಎಂಬಲ್ಲಿ ನಡೆದಿದೆ.

ಘಟನೆಯ ಪರಿಣಾಮ ಬಸ್‌‌ನಲ್ಲಿದ್ದವರಿಗೆ ಹಾಗೂ ಮನೆಯಲ್ಲಿದ್ದವರಿಗೆ ಯಾವುದೇ ಅಪಾಯ ಸಮಭವಿಸಿಲ್ಲ. ಮನೆ ಗೋಡೆ ಸಂಪೂರ್ಣ ಕುಸಿದಿದೆ. ಘಟನಾ ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

ಅಪಘಾತವು ಸುಳ್ಯ ಪುತ್ತೂರು ರಸ್ತೆಯ ಅಮ್ಚಿನಡ್ಕ ಬಳಿ ಸಂಭವಿಸಿದೆ. ಮದುವೆಗೆ ತೆರಳುವ ಪ್ರಯಾಣಿಕರನ್ನು ಕೊಂಡು ಹೋಗುತ್ತಿದ್ದ ಬಸ್‌ ಪುತ್ತೂರಿನಿಂದ ಸುಳ್ಯದ ಕಡೆಗೆ ಹೋಗುತ್ತಿತ್ತು.

ಮಧುರ ಇಂಟರ್ ನ್ಯಾಷನಲ್ ಸ್ಕೂಲ್‌ಗೆ ಸೇರಿದ ಬಸ್‌ ಸುಳ್ಯದಿಂದ ಪರ್ಲ೦ಪಾಡಿಗೆ ಮಕ್ಕಳನ್ನು ಕರೆದುಕೊಂಡು ಬರಲು ತೆರಳುತ್ತಿದ್ದ ವೇಳೆ ಅಮ್ಮಿನಡ್ಕ ಬಳಿ ಪರ್ಲಂಪಾಡಿ ಕಡೆಗೆ ತಿರುವು ತೆಗೆದುಕೊಳ್ಳುತ್ತಿದ್ದ ವೇಳೆ ಮದುವೆ ಬಸ್‌ ಬಂದಿದ್ದು ಅದರ ಚಾಲಕ ಸ್ಕೂಲ್ ಬಸ್ಸಿಗೆ ಡಿಕ್ಕಿ ಹೊಡೆಯುವದನ್ನು ತಪ್ಪಿಸಲು ಇನ್ನೊಂದು ಬದಿಗೆ ವಾಹನವನ್ನು ತಿರುಗಿಸಿದ್ದಾರೆ.

ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್‌ ರಸ್ತೆ ಅಂಚಿನಲ್ಲಿದ್ದ ಮನೆಗೆ ನುಗ್ಗಿದೆ. ಈ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲ ಎನ್ನಲಾಗಿದೆ. ಹೀಗಾಗಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಇನ್ನು ಬಸ್‌‌ನಲ್ಲಿದ್ದವರಿಗೂ ಸಣ್ಣಪುಟ್ಟ ತರಚು ಗಾಯಗಳಾಗಿದೆ ಎಂದು ತಿಳಿದು ಬಂದಿದೆ.

ಮದುವೆ ಬಸ್‌‌ನ ಚಾಲಕ ಸ್ಕೂಲ್ ಬಸ್ಸಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಿದರಿಂದ ದೊಡ್ಡ, ಅನಾಹುತವೊಂದು ತಪ್ಪಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

About The Author

Leave a Reply