ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಉಪಚುನಾವಣೆ: ರಾಜ್ಯದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಭರ್ಜರಿ ಗೆಲುವು.!

ಬೆಂಗಳೂರು : ಬಿಜೆಪಿಗೆ ಬಿಗ್‌ ಶಾಕ್‌ ಎದುರಾಗಿದ್ದು, ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಭರ್ಜರಿ ಗೆಲುವು ಸಾಧಿಸಿದ್ದಾರೆ. ರಾಜ್ಯದ 3 ಕ್ಷೇತ್ರಗಳ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, 3 ಕ್ಷೇತ್ರಗಳಲ್ಲಿ ರಾಂಗ್ರೆಸ್‌ ಅಭ್ಯರ್ಥಿಗಳು ಭರ್ಜರಿ ಗಲುವು ಸಾಧಿಸಿದ್ದಾರೆ.

ಸದ್ಯ, ಅಧಿಕೃತ ಘೋಷಣೆಯೊಂದೇ ಬಾಕಿಯಿದೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ .ಯೋಗೇಶ್ವರ್‌ ಗೆ ಭರ್ಜರಿ ಗೆಲುವು. ಸಾಧಿಸಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪ ಚುನಾವಣೆ ಇಡೀ ದೇಶದ ಗಮನ ಸಳದಿತ್ತು.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಸಿಪಿ ಯೋಗೇಶ್ವರ್‌ ಅವರಿಗೆ ಗಲುವಾಗಿದೆ. ಎನ್ನಿಎ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಅವರಿಗೆ ಸೋಲಾಗಿದೆ.
ಶಿಗ್ಗಾಂವಿ ಉಪಚುನಾವಣೆಯಲ್ಲಿ ಕಾಂಗ್ರಸ್‌ ಅಭ್ಯರ್ಥಿ ಯಾಸೀರ್‌ ಪಠಾನ್‌ 83,400 ಮತಗಳನ್ನು ಪಡೆದುಕೊಂಡಿದ್ದು, 13 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಭಾರಿ. ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಭರತ್‌ ಬೊಮ್ಮಾಯಿ ಸೋಲನುಭವಿಸಿದ್ದಾರೆ.ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಭರ್ಜರಿ. ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆ ಹೊರಬೀಳಬೇಕಿದೆ.

Leave a Reply