ಫಿಸಿಯೋಥೆರಪಿ ವಿದ್ಯಾರ್ಥಿನಿ ನೇಣು ಹಾಕಿ ಆತ್ಮಹತ್ಯೆ..!

ಕೇರಳ : ಫಿಸಿಯೋಥೆರಪಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಕಣ್ಣೂರಿನಲ್ಲಿ ನಡೆದಿದೆ.

ಎರ್ನಾಕುಲಂ ತೊಪ್ಪುಂಪಾಡಿ ಮೂಲದ ಆನ್ ಮರಿಯಾ(Ann maria) ಮೃತ ದುರ್ದೈವಿಯಾಗಿದ್ದು, ಈಕೆ ತಾಲಿಪರಂನ ಲೂರ್ಡ್ಸ್(lourdes college of nursing) ಆಸ್ಪತ್ರೆಯಲ್ಲಿ ಅಂತಿಮ ವರ್ಷದ ಫಿಸಿಯೋಥೆರಪಿ ವಿದ್ಯಾರ್ಥಿನಿ.

ಕಣ್ಣೂರು ತಾಳಿಪರಂನ ಲೂರ್ಡ್ಸ್ ನರ್ಸಿಂಗ್ ಕಾಲೇಜಿನಲ್ಲಿ ನಾಲ್ಕನೇ ವರ್ಷದ ಫಿಸಿಯೋಥೆರಪಿ ವಿದ್ಯಾರ್ಥಿನಿಯಾಗಿದ್ದ ಆನ್ ಮರಿಯಾ ನ.22ರಂದು ತರಗತಿ ಇದ್ದರೂ ಹಾಜರಾಗಿರಲಿಲ್ಲ. ಸಂಜೆ ತರಗತಿ ಮುಗಿದ ನಂತರ ಇತರ ವಿದ್ಯಾರ್ಥಿಗಳು ಹಾಸ್ಟೆಲ್ ಗೆ ತೆರಲಿದಾಗ ಬಾತ್ ರೂಂನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆಯಾಗಿದೆ.

ಘಟನೆಯ ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಆಗಮಿಸಿ ವಿಚಾರಣೆಯನ್ನು ಪೂರ್ಣಗೊಳಿಸಿ ಮೃತದೇಹವನ್ನು ಪರಿಯಾರಂ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಿದ್ದಾರೆ. ಪ್ರಾಥಮಿಕ ತನಿಖೆ ಪ್ರಕಾರ ಇದು ಆತ್ಮಹತ್ಯೆ ಎನ್ನಲಾಗಿದ್ದು, ಸಾವಿಗೆ ಕಾರಣ ಸ್ಪಷ್ಟವಾಗಿಲ್ಲ ಮತ್ತು ತನಿಖೆ ಮುಂದುವರೆದಿದೆ.

ಎರಡು ದಿನಗಳ ಹಿಂದೆಯಷ್ಟೇ ಪತ್ತನಂತಿಟ್ಟದಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಅಮ್ಮು ಸಜೀವನ್ ಆತ್ಮಹತ್ಯೆ ಪ್ರಕರಣ ಮಾಸುವ ಮುನ್ನವೇ ಕಣ್ಣೂರಿನ ಹಾಸ್ಟೆಲ್‌ನ ವಾಶ್ ರೂಂನಲ್ಲಿ ಫಿಸಿಯೋಥೆರಪಿ ವಿದ್ಯಾರ್ಥಿನಿ ಶವವಾಗಿ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.

Leave a Reply