ಮಂಗಳೂರು: ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಗೆಲುವು – ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಮಂಗಳೂರು: ಶಿಗ್ಗಾವಿ, ಸಂಡೂರು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಕಾಂಗ್ರೆಸ್ ಕಚೇರಿ ಮುಂಭಾಗ ಸಂಭ್ರಮಾಚರಣೆ ನಡೆಯಿತು. ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿ ಮುಂಭಾಗ ಎನ್ಎಸ್‌ಯುಐ ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಧ್ವಜ ಹಾರಿಸಿ ಘೋಷಣೆ ಕೂಗಿ ಸಂತಸಪಟ್ಟರು. ಬಳಿಕ ಪಟಾಕಿ ಸಿಡಿಸಿ ಸಂಭ್ರಮಿಸಿದರು.

Leave a Reply