ಉಳ್ಳಾಲ: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

ಉಳ್ಳಾಲ: ಇಲ್ಲಿನ ಸೋಮೇಶ್ವರದ ರುದ್ರಬಂಡೆಯಿಂದ ವಿದ್ಯಾರ್ಥಿನಿಯೋರ್ವಳು ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಮಂಗಳೂರಿನ ಕಾರ್‌ಸ್ಟ್ರೀಟ್ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ, ಉಳ್ಳಾಲದ ಮಾಡೂರು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದಳು.

ರವಿವಾರ ಈಕೆ ಸೋಮೇಶ್ವರದ ರುದ್ರಬಂಡೆಯ ಮೇಲಿನಿಂದ ಸಮುದ್ರಕ್ಕೆ ಹಾರಿದ್ದಾಳೆ. ತಕ್ಷಣ ಅಲ್ಲಿಯೇ ಇದ್ದ ಸ್ಥಳೀಯ ವೀನುಗಾರರೋರ್ವರು ಸಮುದ್ರಕ್ಕೆ ಹಾರಿ ಆಕೆಯನ್ನ ರಕ್ಷಿಸಿದ್ದಾರೆ. ಬಳಿಕ ಟಯರ್ ಟ್ಯೂಬ್‌ ಮೂಲಕ ಬಂದ ಮತ್ತೋರ್ವ ಮೀನುಗಾರ ಆಕೆಯನ್ನು ಮೇಲಕ್ಕೆತ್ತಿ ರಕ್ಷಿಸಿದ್ದಾರೆ. ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದು, ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply