ಮಂಗಳೂರು: ಡಿವೈಎಫ್ಐ ಮುಖಂಡ ಮುನೀರ್ ಕಾಟಿಪಳ್ಳ ವಿರುದ್ಧ FIR

ಮಂಗಳೂರು: ಅನುಮತಿಯಿಲ್ಲದಿದ್ದರೂ ಕೂಳೂರು ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆಯನ್ನು ಧರಣಿ ಪ್ರತಿಭಟನೆ ನಡೆಸಿ ಪೊಲೀಸ್ ಕಮಿಷನರ್, ಶಾಸಕ, ಸಂಸದರ ವಿರುದ್ಧ ಘೋಷಣೆ ಕೂಗಿದ ಹಿನ್ನೆಲೆಯಲ್ಲಿ ಡಿವೈಎಫ್ಐ ಮುಖಂಡ ಮುನೀರ್ ಕಾಟಿಪಳ್ಳ ವಿರುದ್ಧ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುರತ್ಕಲ್ ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿಯ ವತಿಯಿಂದ ನಂತೂರು ಸುರತ್ಕಲ್ ರಾಷ್ಟ್ರೀಯ ಹೆದ್ದಾರಿ ಪೂರ್ಣ ಪ್ರಮಾಣದ ದುರಸ್ತಿಗೆ ಆಗ್ರಹಿಸಿ, ಕೂಳೂರು ಸೇತುವೆ ಕಾಮಗಾರಿ ತಕ್ಷಣ ಪೂರ್ಣಗೊಳಿಸಲು ಮತ್ತು ನಂತೂರು ಮೇಲ್ಸೇತುವೆ ಕಾಮಗಾರಿ ಕಾಲಮಿತಿಯಲ್ಲಿ ಮುಗಿಸಲು ಒತ್ತಾಯಿಸಿ ಕೂಳೂರು ಸೇತುವೆಯ ಬಳಿ ಪ್ರತಿಭಟನೆ ನಡೆದಿತ್ತು. ಈ ಪ್ರತಿಭಟನೆಯಲ್ಲಿ ಸಮಿತಿಯ ಮುಖಂಡ ಮುನೀರ್ ಕಾಟಿಪಳ್ಳ ಮತ್ತಿತರರು ಸೇರಿ ಅಕ್ರಮ ಕೂಟ ಕಟ್ಟಿಕೊಂಡು ಸಾರ್ವಜನಿಕರಿಗೆ ಮತ್ತು ವಾಹನ ಸಂಚಾರಕ್ಕೆ ತೊಂದರೆಯಾಗುವಂತೆ ಧರಣಿ ಕುಳಿತಿದ್ದಾರೆ. ಪ್ರತಿಭಟನೆ ವೇಳೆ ಪೊಲೀಸ್ ಕಮಿಷನರ್, ಶಾಸಕ, ಸಂಸದರ ವಿರುದ್ಧ ಘೋಷಣೆ ಕೂಗಿದ ಹಿನ್ನೆಲೆಯಲ್ಲಿ ಡಿವೈಎಫ್ಐ ಮುಖಂಡ ಮುನೀರ್ ಕಾಟಿಪಳ್ಳ ವಿರುದ್ಧ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply