ಬೆಳ್ತಂಗಡಿ : ನದಿಯಲ್ಲಿ ಸ್ನಾನ ಮಾಡಲು ಹೋದ ಮೂವರು ಯುವಕರು ನೀರುಪಾಲಾದ ಘಟನೆ ಬೆಳ್ತಂಗಡಿ ತಾಲೂಕಿನ ಮೂಡುಕೋಡಿ ಗ್ರಾಮದ ಬರ್ಕಜೆ ಡ್ಯಾಂ ನಲ್ಲಿ ನ 27 ರಂದು ಸಂಜೆ ನಡೆದಿದೆ. ಎಡಪದವಿನ ಲಾರೆನ್ಸ್(20), ಮಡಂತ್ಯಾರಿನ ಸೂರಜ್ (19), ವಗ್ಗದ ಜೈಸನ್(19) ನೀರುಪಾಲಾದವರು.
ವೇಣೂರು ಚರ್ಚ್ ನ ಕಾರ್ಯಕ್ರಮದ ಹಿನ್ನಲೆಯಲ್ಲಿ ಈ ಮೂವರು ಯುವಕರು ಮೂಡುಕೋಡಿ ವಾಲ್ಟರ್ ಎಂಬವರ ಮನೆಗೆ ಬಂದಿದ್ದರು ಎನ್ನಲಾಗಿದೆ. ಮಧ್ಯಾಹ್ನ ಊಟ ಮುಗಿಸಿ ಮನೆ ಸಮೀಪದ ಕಿಂಡಿ ಅಣೆಕಟ್ಟಿನ ಸಮೀಪಕ್ಕೆ ವೀಕ್ಷಣೆಗೆಂದು ಹೋಗಿದ್ದಾರೆ
ಅಲ್ಲಿ ಸ್ನಾನ ಕ್ಕೆಂದು ಇಳಿದವರು ಸುಳಿಗೆ ಸಿಲುಕಿ ನೀರುಪಾಲಾಗಿರುವುದಾಗಿ ತಿಳಿದು ಬಂದಿದೆ. ಸ್ಥಳಕ್ಕೆ ವೇಣೂರು ಪೊಲೀಸರು ದೌಡಾಯಿಸಿದ್ದು, ಮೂವರ ಮೃತದೇಹವನ್ನು ಹೊರಕ್ಕೆ ತೆಗೆಯಲಾಗಿದೆ.
ಮೃತ ಮೂವರು ಯುವಕರು ಸಹಪಾಠಿಗಳಾಗಿದ್ದು ಮಂಗಳೂರಿನ ನರ್ಸಿಂಗ್ ಕಲಿಯುತ್ತಿರುವ ವಿದ್ಯಾರ್ಥಿಗಳು ಎಂಬ ಪ್ರಾಥಮಿಕ ಮಾಹಿತಿ ಲಭಿಸಿದೆ.