
ಪಾಣೆಮಂಗಳೂರು-ನೂತನ ಸೇತುವೆಯಲ್ಲಿ ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಕೆಲ ಹೊತ್ತುಗಳ ಕಾಲ ಸೇತುವೆಯಲ್ಲಿ ವಾಹನ ಸಂಚಾರಕ್ಕೆ ತಡೆ ಉಂಟಾದ ಘಟನೆ ನ. 29 ರಂದು ರಾತ್ರಿ ಸುಮಾರು 7 ಗಂಟೆಗೆ ನಡೆದಿದೆ.



ಬಿ.ಸಿ.ರೋಡಿನಿಂದ ಮೆಲ್ಕಾರ್ ಕಡೆಗೆ ಸಂಚರಿಸುತ್ತಿದ್ದ ಲಾರಿ ಹಾಗೂ ಪಾಣೆಮಂಗಳೂರು ಕಡೆಯಿಂದ ಬರುತ್ತಿದ್ದ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಘಟನೆಯಲ್ಲಿ ಕಾರು ಜಖಂಗೊಂಡಿದ್ದು, ಕಾರಿನಲ್ಲಿ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆಯಿಂದ ಸುಮಾರು ಒಂದು ತಾಸಿಗಿಂತಲೂ ಅಧಿಕೃತವಾಗಿ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಟ್ರಾಫಿಕ್ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಸಂಚಾರ ವ್ಯವಸ್ಥೆಗೆ ಅನುವು ಮಾಡಿಕೊಟ್ಟಿದ್ದಾರೆ.