November 8, 2025
WhatsApp Image 2024-12-02 at 6.21.22 PM

ಮಂಗಳೂರು :ಭಾರತೀಯ ಹವಾಮಾನ ಇಲಾಖೆಯು ನೀಡಿದ ಹವಾಮಾನದ ಮುನ್ಸೂಚನೆಯಂತೆ ಬಂಗಾಲ ಕೊಲ್ಲಿ ಸಮುದ್ರದಲ್ಲಿ ಫೆಂಗಲ್ ಚಂಡ ಮಾರುತ ಉಂಟಾಗಿರುವ ಪರಿಣಾಮದಿಂದ ಕರಾವಳಿ ಜಿಲ್ಲೆಯಾದ್ಯಂತ 3-12-2024 ಗುಡುಗು ಸಹಿತ ಭಾರೀ ಮಳೆಯಾಗಲಿದ್ದು ಆರೆಂಜ್ ಅಲರ್ಟ್ ಘೋಷಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ಸರ್ಕಾರಿ ಅನುದಾನಿತ ಮತ್ತು ಪ್ರಾಥಮಿಕ ಪ್ರೌಢಶಾಲೆ ಪದವಿ ಪೂರ್ವ ಕಾಲೇಜು ಪಿಯು ಸಿ ವರೆಗೆ ರಜೆಯನ್ನು ಜಿಲ್ಲಾಧಿಕಾರಿ ಮಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ .

ಕಾಸರಗೋಡು ಜಿಲ್ಲೆಯ ಹಲವು ಪ್ರದೇಶದ ತಗ್ಗು ಪ್ರದೇಶಗಳು ಮುಳುಗಿದ್ದು ಕೃತಕ ನೆರೆ ಸಂಭವಿಸಿದೆ. ನಾಳೆ ಅಂದ್ರೆ ಡಿಸೆಂಬ‌ರ್ 3ರಂದು ಮಳೆ ಇನ್ನಷ್ಟು ತೀವ್ರತೆ ಪಡೆಯಲಿದ್ದು ಜಿಲ್ಲಾಡಳಿತ ಎಚ್ಚರಿಕೆಯ ಸೂಚನೆ ನೀಡಿದೆ. ಸಾರ್ವಜನಿಕರು ಹಾಗೂ ಪ್ರವಾಸಿಗರು ಕಡಲ ತೀರ, ತಗ್ಗು ಪ್ರದೇಶಗಳಿಗೆ ತೆರಳದಂತೆ ಹಾಗೂ ಮೀನುಗಾರರು ನದಿ ಸಮುದ್ರಗಳಿಗೆ ತೆರಳದಂತೆ ಸೂಚನೆ ನೀಡಿದ್ದಾರೆ. ಯಾವುದೇ ವಿಪತ್ತು ಸಂಭವಿಸಿದ್ರೂ ಜಿಲ್ಲಾಡಳಿತದ ಸಹಾಯವಾಣಿಗೆ ಕರೆ ಮಾಡಿ ತಿಳಿಸುವಂತೆ ಸಲಹೆ ನೀಡಿದ್ದಾರೆ.

ಕೇಂದ್ರ ಹವಾಮಾನ ಕೇಂದ್ರ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯ ವೃತ್ತಿಪರ ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳಿಗೆ ನಾಳೆ (ಡಿಸೆಂಬರ್ 3) ಜಿಲ್ಲಾಧಿಕಾರಿ ಕೆ.ಇಂಬುಶೇಖ‌ರ್ ರಜೆ ಘೋಷಿಸಿದ್ದಾರೆ. ಟ್ಯೂಷನ್ ಕೇಂದ್ರಗಳು, ಅಂಗನವಾಡಿಗಳು ಮತ್ತು ಮದರಸಾಗಳಿಗೂ ರಜೆ ಅನ್ವಯಿಸುತ್ತದೆ ಮಾದರಿ ವಸತಿ ಶಾಲೆಗಳಿಗೆ ರಜೆ ಅನ್ವಯಿಸುವುದಿಲ್ಲ ಎಂದು ತಿಳಿಸಲಾಗಿದೆ.

About The Author

Leave a Reply