October 13, 2025
k1

ಉಳ್ಳಾಲ : ಫೆಂಗಲ್ ಚಂಡಮಾರುತದಿಂದ ದ.ಕ.ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಅಲ್ಲಲ್ಲಿ ಅವಾಂತರ ಸೃಷ್ಟಿಯಾಗಿದೆ. ಉಳ್ಳಾಲ ಕಿನ್ಯಾ ಗ್ರಾಪಂ ವ್ಯಾಪ್ತಿಯ ನಡುಮನೆ ಎಂಬಲ್ಲಿ ನೆರೆನೀರು ನುಗ್ಗಿದ್ದು ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕ, ಸ್ಪೀಕರ್ ಯು.ಟಿ. ಖಾದರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು‌.

ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದ ನಡುಮನೆಯಲ್ಲಿ ಸೇತುವೆಯನ್ನು ಮೀರಿ ನೀರು ಜನವಸತಿ ಪ್ರದೇಶಕ್ಕೆ ನುಗ್ಗಿದೆ. ಪರಿಣಾಮ ಜನಜೀವನ ಅಸ್ತವ್ಯಸ್ತವಾಗಿದೆ. ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಯು.ಟಿ. ಖಾದರ್ ಅವರು ಪರಿಶೀಲನೆ ನಡೆಸಿದರು. ಅಲ್ಲದೆ ತಕ್ಷಣ ಸಣ್ಣನೀರಾವರಿ ಇಲಾಖೆಗೆ ಮಾಹಿತಿ ನೀಡಿ ಪರಿಹಾರ ನೀಡಲು ಆದೇಶಿಸಿದರು.

About The Author

Leave a Reply