ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಗ್ರಾ.ಪಂಚಾಯತ್ ಉಪಚುನಾವಣೆಯಲ್ಲಿ ಗೆಲವು ಸಾದಿಸಿದ ಹಾಗೂ ಪುರಸಭೆ,ಗ್ರಾಮ ಪಂಚಾಯತ್ ಅದ್ಯಕ್ಷರಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ವತಿಯಿಂದ ಮಂಗಳೂರಿನ ಕಾಂಗ್ರೆಸ್ ಕಛೇರಿಯಲ್ಲಿ ಅಭಿನಂದನಾ ಸಭೆಯನ್ನು ಎರ್ಪಡಿಸಲಾಗಿದ್ದು,ಕಾರಣಾಂತರಗಳಿಂದ ಕಾರ್ಯಕ್ರಮಕ್ಕೆ ಬರಲು ಅಸಾದ್ಯವಾದ ಬಂಟ್ವಾಳ ಪುರಸಭೆಯ ನೂತನ ಅದ್ಯಕ್ಷರಾದ ವಾಸುಪೂಜಾರಿ ಲೊರೆಟ್ಟೊ ಹಾಗೂ ಮಾಣಿ ಗ್ರಾಮ ಪಂಚಾಯತ್ ಅದ್ಯಕ್ಷರಾದ ಶ್ರೀ ಸುದೀಪ್ ಕುಮಾರ್ ಶೆಟ್ಟಿ ಮಾಣಿ ಅವರನ್ನು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾದ್ಯಕ್ಷರಾದ ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಅವರ ನೇತೃತ್ವದಲ್ಲಿ ಕಛೇರಿಗೆ ತೆರಳಿ ಸನ್ಮಾನಿಸಿ ಅಭಿನಂದಿಸಿ ಶುಭಾಶಯ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಪಂಚಾಯತ್ ರಾಜ್ ಸಂಘಟನೆಯ ಪ್ರದಾನ ಕಾರ್ಯದರ್ಶಿ ಜಗದೀಶ್ ಕೊಯಿಲ ,ಪಾಣೆಮಂಗಳೂರು ಬ್ಲಾಕ್ ಪಂಚಾಯತ್ ರಾಜ್ ಸಂಘಟನೆಯ ಅದ್ಯಕ್ಷರಾದ ಸಂದೇಶ್ ಶೆಟ್ಟಿ,ಬಂಟ್ವಾಳ ಪುರಸಭೆಯ ನೂತನ ಸದಸ್ಯರಾದ ಪುರುಷೋತ್ತಮ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು..