August 30, 2025
WhatsApp Image 2024-12-05 at 10.43.41 AM
ಮಂಗಳೂರು : ನಗರದಲ್ಲಿ ಕರ್ತವ್ಯ ಲೋಪವೆಸಗಿದ ದ.ಕ. ಜಿಲ್ಲಾ ಕಾರಾಗೃಹದ ಅಧೀಕ್ಷಕ ಬಿ.ಟಿ. ಓಬಳೇಶಪ್ಪ ಅವರನ್ನು ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಮುಂದಿನ ಆದೇಶ ಬರುವ ತನಕ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.
ಇತ್ತೀಚೆಗೆ ಪೊಲೀಸರು ಕಾರಾಗೃಹಕ್ಕೆ ದಾಳಿ ನಡೆಸಿದ ಸಂದರ್ಭದಲ್ಲಿ ಜೈಲಿನೊಳಗೆ ನಿಷೇಧಿತ ವಸ್ತುಗಳು ಪತ್ತೆಯಾಗಿದ್ದವು. ಆ ಬಳಿಕ ಬಿ.ಟಿ. ಓಬಳೇಶಪ್ಪ ಅವರನ್ನು ಅಮಾನತುಗೊಳಿಸಲಾಗಿತ್ತು.
ಇನ್ನು ಮೈಸೂರು ಕೇಂದ್ರ ಕಾರಾಗೃಹದ ಸಹಾಯಕ ಅಧಿಧೀಕ್ಷಕ ಕೆ.ಎನ್. ಮೋಹನ್ ಕುಮಾರ್ ಅವರನ್ನು ಮಂಗಳೂರು ಕಾರಾಗೃಹದ ಅಧೀಕ್ಷಕರ ಪ್ರಭಾರ ವಹಿಸಲಾಗಿದೆ ಎಂದು ಕಾರಾಗೃಹ ಮತ್ತು ಸುಧಾರಣ ಸೇವೆಯ ಮಹಾನಿರ್ದೇಶಕ ದೇವಜ್ಯೋತಿ ರೇ ಮಾಹಿತಿ ನೀಡಿದ್ದಾರೆ.
ಮೈಸೂರು ಕೇಂದ್ರ ಕಾರಾಗೃಹದ ಸಹಾಯಕ ಅಧೀಕ್ಷಕ ಕೆ.ಎನ್. ಮೋಹನ್ ಕುಮಾರ್ ಅವರನ್ನು ಮಂಗಳೂರು ಕಾರಾಗೃಹದ ಅಧೀ ಕ್ಷಕರ ಪ್ರಭಾರ ವಹಿಸಲಾಗಿದೆ ಎಂದು ಕಾರಾಗೃಹ ಮತ್ತು ಸುಧಾರಣಾ ಸೇವೆಯ ಮಹಾನಿರ್ದೇಶಕ ದೇವಜ್ಯೋತಿ ರೇ ತಿಳಿಸಿದ್ದಾರೆ.

 

 

ಜು.25ರಂದು ಮುಂಜಾನೆ 4 ಗಂಟೆಗೆ, ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ನೇತೃತ್ವದಲ್ಲಿ ಇಬ್ಬರು ಡಿಸಿಪಿಗಳು, ಮೂವರು ಎಸಿಪಿಗಳು, 15. ಇನ್‌ ಸ್ಪೆಕ್ಟರ್‌ಗಳು ಸೇರಿದಂತೆ 150 ಪೊಲೀಸರ ಪಡೆ ಜೈಲಿಗೆ ದಾಳಿ ನಡೆಸಿದ್ದು, ಈ ಸಂದರ್ಭ ಗಾಂಜಾ ಸಹಿತ ಹಲವಾರು ಪ್ಯಾಕೆಟ್ ಮಾದಕ ವಸ್ತುಗಳು, 25 ಮೊಬೈಲ್‌ ಫೋನ್, ಬ್ಲೂಟೂಥ್, ಐದು ಇಯರ್ ಫೋ ನ್, ಪೆನ್ ಡೈವ್, ಎರಡು ಚಾರ್ಜರ್‌ ಗಳು, ಕತ್ತರಿಗಳು, ಮೂರು ಕೇಬಲ್ ವಶಪಡಿಸಲಾಗಿತ್ತು. ಈ ಬಗ್ಗೆ ಕೇಸು ದಾಖಲಿಸಿ ತನಿಖೆ ನಡೆಸಲಾಗುತ್ತಿತ್ತು.

About The Author

Leave a Reply