August 30, 2025
WhatsApp Image 2024-12-07 at 9.32.41 AM

ಮಂಗಳೂರು: ಶಕ್ತಿನಗರದಲ್ಲಿ ಮಹಿಳೆಯರಿಗೆ ಸರ್ಕಾರದ ಶಕ್ತಿ ಯೋಜನೆಯಡಿಯಲ್ಲಿ ಉಚಿತ ಬಸ್ ಪ್ರಯಾಣದ ಬಸ್ ಚಾಲನೆ ಕಾರ್ಯಕ್ರಮ ನಡೆಯಿತು. ವಿಧಾನ ಪರಿಷತ್ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಪಾಲ್ಗೊಂಡು ಬಸ್ ಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋ, 2024ರ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ, ದಕ್ಷಿಣ ಕನ್ನಡ ಜಿಲ್ಲಾ ಕಾನೂನು, ಮಾನವ ಹಾಗೂ ಮಾಹಿತಿ ಹಕ್ಕು ಘಟಕದ ಅಧ್ಯಕ್ಷ ಮನೋರಾಜ್, ದಕ್ಷಿಣ ಕನ್ನಡ ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷ ಲಾರೆನ್ಸ್ ಡಿಸೋಜ ಹಾಗೂ ಸ್ಥಳೀಯ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಮಹಿಳೆಯರ ಬಸ್ ಬೇಡಿಕೆಯ ಕುರಿತು ಮಂಜುನಾಥ ಭಂಡಾರಿಯವರು ಈ ಹಿಂದೆ ಸರಕಾರಕ್ಕೆ ಮನವಿ ಸಲ್ಲಿಸಿದ್ದರು. ಅದೀಗ ನೆರವೇರಿರುವುದು ಈ ಭಾಗದ ನಾಗರಿಕರ ಸಂತಸಕ್ಕೆ ಕಾರಣವಾಗಿದೆ.

About The Author

Leave a Reply