ದಕ್ಷಿಣ ಕನ್ನಡ: ನೇತ್ರಾವತಿಗೆ ಇನ್ನೊಂದು ಸೇತುವೆ: ಸಂಪುಟ ಅಸ್ತು

ಬಹುವರ್ಷಗಳ ಬೇಡಿಕೆಯಾದ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೇತ್ರಾವತಿ ನದಿಗೆ ಅಡ್ಡಲಾಗಿ ಹೊಸ ಸೇತುವೆ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ.ಗುರುವಾರ ನಡೆದ ಸಂಪುಟ ಸಭೆಯಲ್ಲಿ ಮಂಗಳೂರು ತಾಲೂಕಿನ ಮಂಗಳೂರು- ಚೆರ್ವತ್ತೂರು- ಕರಾವಳಿ ಜಿಲ್ಲಾ ಮುಖ್ಯ ರಸ್ತೆ (ಕೋಟೆ ಪುರ- ಬೋಳಾರ)ಯಲ್ಲಿ ನೇತ್ರಾವತಿ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಯಿತು.

ಸುಮಾರು 200 ಕೋ.ರೂ. ವೆಚ್ಚದ ಕಾಮಗಾರಿ ಇದಾಗಿದ್ದು, ಇದರಿಂದ ಆ ಭಾಗದ ಜನರಿಗೆ ಸಾಕಷ್ಟು ಅನುಕೂಲ ಆಗಲಿದೆ. ಇದು ದಶಕದ ಬೇಡಿಕೆಯೂ ಆಗಿತ್ತು.

Leave a Reply