ಮಂಗಳೂರು: ಹಿಂದೂ ಯುವತಿ ಮತ್ತು ಮಹಿಳೆ ಇರುವ ಮನೆಗೆ ಅನ್ಯ ಕೋಮಿನ ಯುವಕನೋರ್ವ ಬಂದು ಕಿಟಾಲೆ ಮತ್ತು ಹಲ್ಲೆ ನಡೆಸಿರುವ ಘಟನೆ ಮಂಗಳೂರಿನ ಕುಲಶೇಖರದಲ್ಲಿ ನಡೆದಿದೆ. ಮಾಹಿತಿ ಪಡೆದ ಸ್ಥಳೀಯರು ಯುವಕಕನ್ನು ಹಿಡಿದು ಧರ್ಮದೇಟು ನೀಡಿ ಪೋಲಿಸರಿಗೆ ಒಪ್ಪಿಸಿದ್ದಾರೆ. ಈತ ಮಹಿಳೆಗೆ ರವಿ ಎಂಬ ಹೆಸರಿನಲ್ಲಿ ಒಂದು ವರ್ಷದ ಹಿಂದೆ ಪರಿಚಯವಾಗಿದ್ದು ಆಗಾಗ ಮಹಿಳೆ ಮನೆಗೆ ಬರುತ್ತಿದ್ದ ಎನ್ನಲಾಗಿದೆ. ಇವರಿಬ್ಬರ ಮಧ್ಯೆ ಹಣಕಾಸಿನ ವ್ಯವಹಾರವೂ ಇತ್ತೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಶುಕ್ರವಾರ ಬೆಳಿಗ್ಗೆ ಬಂದಿದ್ದ ಯುವಕ ಮಹಿಳೆ ಮತ್ತು ಮಹಿಳೆಯ ಅಕ್ಕನ ಮಗಳೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಇದರಿಂದ ಮಹಿಳೆ ಮತ್ತು ಯುವಕನ ಮಧ್ಯೆ ಗಲಾಟೆ ನಡೆದಿದೆ. ಮಾಹಿತಿ ಪಡೆದ ಸ್ಥಳಿಯರು ಬಂದು ಯುವಕಕನ್ನು ಹಿಡಿದು ಧರ್ಮದೇಟು ನೀಡಿ ವಿಚಾರಿಸಿದ್ದಾರೆ. ಈ ವೇಳೆ ತಾನು ಮುಸ್ಲಿಂ ಸಮುದಾಯಕ್ಕೆ ಸೇರಿದವನಾಗಿದ್ದು, ತನ್ನ ಹೆಸರು ಸೈಯದ್ ನಹೀಮ್ (25) ಎಂದು ಬಾಯ್ಬಿಟ್ಟಿದ್ದಾನೆ.
ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿ ಯುವಕಕನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಕಂಕನಾಡಿ ನಗರ ಠಾಣಾ ಪೊಲೀಸರು ಆರೋಪಿ ಸಯೀದ್ ನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
Like this:
Like Loading...
Related