ಗಂಡಸರಿಗೂ ಫ್ರೀ ಬಸ್‌: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಬೆಂಗಳೂರು: ಗಂಡಸರಿಗೂ ಫ್ರೀ ಬಸ್‌ ಕೊಟ್ರೆ ಕೊಟ್ರೆ ಕೆಎಸ್‌ಆರ್‌ಟಿಸಿ ಮುಚ್ಚಬೇಕಾಗುತ್ತೆ ಅಂತ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಯಳಂದೂರಲ್ಲಿ 100 ಹಾಸಿಗೆಗಳ ಆಸ್ಪತ್ರೆ ಕಟ್ಟಡ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಶನಿವಾರ ಸಂಜೆ ಮಾತನಾಡುವಾಗ ಗ್ಯಾರಂಟಿ ಯೋಜನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಜನತೆಗೆ ಮಾಹಿತಿ ನೀಡಿದರು. ಈ ವೇಳೆ ಅಲ್ಲೇ ಇದ್ದ ಪುರು ಷರು ನಮಗೂ ಫ್ರೀ ಬಸ್ ಕೊಡಿ ಎಂದು ಆಗ್ರಹಿಸಿದರು, ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು ಗಂಡಸರಿಗೂ ಫ್ರೀ ಬಸ್‌ ಕೊಟ್ರೆ ಕೆಎಸ್‌ಆರ್‌ಟಿಸಿ ಮುಚ್ಚಬೇಕಾಗುತ್ತೆ ಅಂತ ಹೇಳಿದರು.ಇನ್ನೂ ಬಳ್ಳಾರಿ ಆಸ್ಪತ್ರೆಗೆ ಇಂದು ಆರೋಗ್ಯ ಸಚಿವರು ಹಾಗೂ ಇಲಾಖೆ ಅಧಿಕಾರಿಗಳು ಕೂಡ ಭೇಟಿ ನೀಡಿ ಬಾಣಂತಿ ಸಾವಿನ ಕುರಿತು ಪರಿಶೀಲನೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Leave a Reply