December 21, 2025
WhatsApp Image 2024-12-10 at 9.02.17 AM

ಬೆಂಗಳೂರು: ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್​ಎಂ ಕೃಷ್ಣ (SM Krishna) ಅವರು ನಿಧನರಾಗಿದ್ದಾರೆ. ಎಸ್​ಎಂ ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದೆ. ಇದೇ ವೇಳೆ ಬುಧವಾರ (ಡಿಸೆಂಬರ್ 11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಡಿಸೆಂಬರ್​ 10 ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆಗೆ ಘೋಷಣೆ ಮಾಡಲಾಗಿದೆ. ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಅಗಲಿದ ಹಿರಿಯ ಚೇತನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಾಗುವುದು.

 

ಖಾಸಗಿ ಶಾಲೆಗಳಿಗೂ ರಜೆ
ಬುಧವಾರ ಖಾಸಗಿ ಶಾಲಾ-ಕಾಲೇಜುಗಳಿಗೂ ರಜೆ ಘೋಷಣೆ ಮಾಡಲಾಗಿದೆ. ಖಾಸಗಿ ಶಾಲೆಗಳ ಒಕ್ಕೂಟ ರಜೆ ಘೋಷಿಸಿ ಆದೇಶ ಹೊರಡಿಸದೆ. ಶನಿವಾರ ಪೂರ್ಣ ದಿನ ತರಗತಿ ನಡೆಸಿ ಸರಿಪಡಿಸಿಕೊಳ್ಳುವಂತೆ ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

About The Author

Leave a Reply