November 29, 2025
WhatsApp Image 2024-12-10 at 1.13.05 PM

ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಹಮ್ಮಿಕೊಂಡಿರುವ ಸಾಮಾಜಿಕ ನ್ಯಾಯಕ್ಕಾಗಿ ಚಲೋ ಬೆಳಗಾವಿ ಅಂಬೇಡ್ಕರ್ ಜಾಥಾ-2 ಡಿಸೆಂಬರ್ 11ರಂದು ಬುಧವಾರ ಸಂಜೆ ಉಪ್ಪಿನಂಗಡಿ ತಲುಪಲಿದೆ.
ನಮ್ಮದು ಅಹಿಂದ ಸರ್ಕಾರ, ನಾವು ಸಾಮಾಜಿಕ ನ್ಯಾಯದ ಚಾಂಪಿಯನ್ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ದಲಿತ, ಅಲ್ಪಸಂಖ್ಯಾತ, ಮತ್ತು ಹಿಂದುಳಿದ ವರ್ಗಗಳ ಹಲವು ಜ್ವಲಂತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡುತ್ತಿಲ್ಲ. ಕೇವಲ ನೆಪ ಮಾತ್ರದ ಮೌಖಿಕ ಹೇಳಿಕೆಗಳನ್ನು ನೀಡಿ ಕಣ್ಣೆರೆಸುವ ತಂತ್ರ ಮಾಡುತ್ತಿದೆ. ಬಿಜೆಪಿಯ ಐಟಿ ಸೆಲ್ ನ ಮತ್ತು ಬಿಜೆಪಿ ಬೆಂಬಲಿತ ಕೆಲವು ಕೋಮುವಾದಿ ಮಾಧ್ಯಮಗಳ ಅಪಪ್ರಚಾರಕ್ಕೆ ಹೆದರಿ ತಕ್ಷಣ U-Turn ಹೊಡೆದು ತನ್ನ ಹೇಳಿಕೆಗಳನ್ನೇ ಅಲ್ಲಗಳೆಯುವುದು ಈ ಸರ್ಕಾರದ ಸಾಮಾನ್ಯ ಚಾಳಿಯಾಗಿಬಿಟ್ಟಿದೆ. ಈ ಅಸಹಾಯಕ U Turn ಚಾಳಿಯನ್ನು ಖಂಡಿಸಿ, ಚಳಿಗಾಲದ ಅಧಿವೇಶನ ನಡೆಯುವ ಸುವರ್ಣಸೌಧ ಬೆಳಗಾವಿಗೆ ಜನಾಗ್ರಹಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಚಲೋ ಬೆಳಗಾವಿ ಅಂಬೇಡ್ಕರ್ ಜಾಥಾ -2 ಅನ್ನು ಉಡುಪಿಯಿಂದ ಹಮ್ಮಿಕೊಳ್ಳಲಾಗಿದೆ.
ಚಲೋ ಬೆಳಗಾವಿ ಅಂಬೇಡ್ಕರ್ ಜಾಥಾ -2 ದಲ್ಲಿ ಪಕ್ಷದ ರಾಷ್ಟ್ರೀಯ ನಾಯಕರು, ರಾಜ್ಯ ನಾಯಕರು, ಜಿಲ್ಲಾ ಮುಖಂಡರು, ಸಾಮಾಜಿಕ ಹೋರಾಟಗಾರರು, ವಿವಿಧ ಸಂಘಟನೆ ಪದಾಧಿಕಾರಿಗಳು, ನಾಯಕರು ಹಾಗೂ ಪುತ್ತೂರು , ಉಪ್ಪಿನಂಗಡಿಯ ನಾಗರೀಕರು ಪಾಲ್ಗೊಳ್ಳಲಿದ್ದಾರೆ.
ಬುಧವಾರ ಸಾಯಂಕಾಲ ಉಪ್ಪಿನಂಗಡಿ ಜಂಕ್ಷನ್ ಬಳಿ ಅಂಬೇಡ್ಕರ್ ಜಾಥಾ -2 ತಲುಪಲಿದೆ. ಉಪ್ಪಿನಂಗಡಿಯಲ್ಲಿ ಕಾಲ್ನಡಿಗೆ ಜಾಥಾ ಬಸ್ ನಿಲ್ದಾಣದ ವರೆಗೆ ನಡೆಯಲಿದೆ. ಎಂದು SDPI ಪುತ್ತೂರು ವಿಧಾನಸಭಾ ಅಧ್ಯಕ್ಷರಾದ ಕೆ ಎ ಸಿದ್ದೀಕ್ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Leave a Reply