
ಕಾರ್ಕಳ : ಕಾರ್ಕಳ ಪುರಸಭಾ ವ್ಯಾಪ್ತಿಯ ನಿವಾಸಿಯಾಗಿರುವ ಸುಹೇಬ್, ಮಲ್ಪೆಯಿಂದ ಕಾರ್ಕಳಕ್ಕೆ ಸ್ಕೂಟಿಯಲ್ಲಿ ಬರುತ್ತಿದ್ದಾಗ ಹಿರಿಯಡ್ಕದಲ್ಲಿ ಎದೆನೋವು ಕಾಣಿಸಿಕೊಂಡಿದ್ದು ಹೃದಯಾಘಾತದಿಂದ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.



ಮಲ್ಪೆಯಿಂದ ಕಾರ್ಕಳಕ್ಕೆ ಸ್ಕೂಟಿಯಲ್ಲಿ ಬರುತ್ತಿದ್ದ ಸಂದರ್ಭ ಹಿರಿಯಡ್ಕದಲ್ಲಿ ಎದೆನೋವು ಕಾಣಿಸಿಕೊಂಡಿದ್ದು, ಸ್ಕೂಟಿ ನಿಲ್ಲಿಸಿದವರು ಕುಸಿದು ಬಿದ್ದಿದ್ದಾರೆ. ತಕ್ಷಣವೇ ಇವರನ್ನು ಚಿಕಿತ್ಸೆಗೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕರೆದೊಯ್ದರೂ, ಆದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಸುಹೇಬ್ ಜರಿಗುಡ್ಡೆಯ ಗ್ಯಾರೇಜ್ ನಲ್ಲಿ ಕಾರು ಪೈಂಟರ್ ಆಗಿ ಕೆಲಸ ಮಾಡುತ್ತಿದ್ದರು.
ಮೃತರು ಪತ್ನಿ, 2 ವರ್ಷದ ಮಗು, ತಾಯಿ, ಸಹೋದರ ಮತ್ತು ಸಹೋದರಿಯರನ್ನು ಅಗಲಿದ್ದಾರೆ.