May 6, 2026
WhatsApp Image 2024-12-12 at 10.36.05 AM

ಬೆಂಗಳೂರು : ಎರಡು ಮಕ್ಕಳನ್ನು ತಾಯೊಬ್ಬಳು ಉಸಿರುಗಟ್ಟಿಸಿ ಕೊಂದು ತಾನು ಕೂಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಕೋಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕುಸುಮ (35) ಆತ್ಮಹತ್ಯೆಗೆ ಶರಣಾದ ತಾಯಿ ಎಂದು ತಿಳಿದುಬಂದಿದೆ. ಕೋಡಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಕೌಟುಂಬಿಕ ಕಲಹಕ್ಕೆ ಮನನೊಂದು ಡೆತ್ ನೋಟ್ ಬರೆದಿಟ್ಟು ಕುಸುಮ ತನ್ನ ಇಬ್ಬರು ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆಗೆ ಶರಣಾಗಿದ್ದಾರೆ.

6 ವರ್ಷದ ಮಗು ಹಾಗೂ 7 ವರ್ಷದ ಮಗಳನ್ನು ಕುಸುಮ ಕೊಂದು ತಾನು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ. ಎರಡು ದಿನಗಳ ಹಿಂದೆ ಪತಿಯೊಂದುಗೆ ಜಗಳ ಮಾಡಿಕೊಂಡು, ಮನನೊಂದ ಕುಸುಮ ಡೆತ್ ನೋಟ್ ನಲ್ಲಿ ನಮ್ಮ ಸಾವಿಗೆ ನಾವೇ ಕಾರಣ ಎಂದು ಬರೆದಿಟ್ಟು ನೇಣು ಬಿಗಿದು ಕೊಂಡು ಇದೀಗ ತಾನು ಆತ್ಮಹತ್ಯೆಕೊಂಡು ಇಬ್ಬರು ಮಕ್ಕಳನ್ನು ಕೊಂದಿದ್ದಾಳೆ. ಕೊಡಿಗೆಹಳ್ಳಿ ಪೊಲೀಸ್ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

About The Author

Leave a Reply