ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ,ಗಂಭೀರ ಗಾಯ

ಪುತ್ತೂರು: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಪುತ್ತೂರಿನ ಬೈಪಾಸ್ ತೆಂಕಿಲ ವಿವೇಕಾನಂದ ಶಾಲೆಯ ಬಳಿ ನಡೆದಿದೆ. ಉಡುಪಿ ನೊಂದಣಿಯ ಬ್ರಿಝಾ ಕಾರು ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಕಾರಿನಲ್ಲಿದ್ದವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದೆ. ಗಾಯಗೊಂಡವರನ್ನ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದವರು ಉಡುಪಿ ಮೂಲದವರೆಂಬ ಮಾಹಿತಿ ತಿಳಿದು ಬಂದಿದೆ.

Leave a Reply