March 14, 2026
WhatsApp Image 2024-12-12 at 4.16.02 PM

ಬೆಳಗಾವಿ ಪಂಚಮಸಾಲಿ ಹೋರಾಟಗಾರ ಮೇಲೆ ಲಾಠಿ ಚಾರ್ಜ್ ಪ್ರಕರಣ ವಿಧಾನಸಭೆ ಹಾಗೂ ವಿಧಾನಪರಿಷತ್​ನಲ್ಲಿ ಪ್ರತಿಧ್ವನಿಸಿದ್ದು, ಈ ಸಂಬಂಧ ಸನದಲ್ಲಿ ವಿಪಕ್ಷ ಬಿಜೆಪಿ ಹಾಗೂ ಆಡಳಿತ ಪಕ್ಷದ ನಡುವೆ ಮಾತಿನ ಚಕಮಕಿ ನಡೆದಿದೆ. ಇದರಿಂದ ಸ್ಪೀಕರ್ ಯುಟಿ ಖಾದ್ ಅವರು ಸದನವನ್ನು ಕೊಂಚ ಸಮಯ ಮುಂದೂಡಿದರು. ಇದರಿಂದ ಕೆರಳಿದ ವಿಪಕ್ಷ ಬಿಜೆಪಿ ಸದಸ್ಯರು ಸ್ಪೀಕರ್​ ಜೊತೆ ಜಗಳಕ್ಕೆ ಬಿದ್ದಿದ್ದಾರೆ. ಸ್ಪೀಕರ್ ಕಚೇರಿಯಲ್ಲಿ ಖಾದರ್​ ಜೊತೆ ಏರು ಧ್ವನಿಯಲ್ಲೇ ಜಗಳ ಮಾಡಿದ್ದಾರೆ. ಅಲ್ಲದೇ ಸ್ಪೀಕರ್​ ಕಚೇರಿಯ ಮೇಜು ಗುದ್ದಿ ಖಾದರ್​ ಅವರ ಜೊತೆ ಏರು ಧ್ವನಿಯಲ್ಲೇ ಜಗಳಕ್ಕಿಳಿದರು.

ಶಾಸಕ ಸುನೀಲ್ ಕುಮಾರ್, ವಿಪಕ್ಷ ನಾಯಕ ಅಶೋಕ್, ವಿಜಯೇಂದ್ರ, ಅರವಿಂದ್ ಬೆಲ್ಲದ್, ಸಿದ್ದು ಸವದಿ, ಸುರೇಶ್ ಗೌಡ ಸೇರಿದಂತೆ ಬಿಜೆಪಿ ಶಾಸಕರು ಸ್ಪೀಕರ್ ಕಚೇರಿಯಲ್ಲಿ ಖಾದರ್ ಅವರ ಜೊತೆ ವಾಗ್ದಾದ ನಡೆಸಿದ್ದಾರೆ. ಬಿಜೆಪಿ ಶಾಸಕರು ಸ್ಪೀಕರ್ ಜೊತೆ ಜಗಳದ ವಿಷಯ ತಿಳಿಯುತ್ತಿದ್ದಂತೆಯೇ ಸಚಿವರು ಮತ್ತು ಕಾಂಗ್ರೆಸ್ ಶಾಸಕರು ಸ್ಥಳಕ್ಕೆ ದೌಡಾಯಿಸಿ ಸ್ಪೀಕರ್ ಯುಟಿ ಖಾದರ್ ಬೆಂಬಲಕ್ಕೆ ನಿಂತರು. ಹೀಗಾಗಿ ಎರಡೂ ಕಡೆಯಿಂದ ವಾಗ್ವಾದ ತೀವ್ರ ಸ್ವರೂಪ ಪಡೆದುಕೊಂಡಿದ್ದರಿಂದ ಸ್ಪೀಕರ್ ಕಚೇರಿಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ.

About The Author

Leave a Reply