
ಹೈದರಾಬಾದ್: ಥಿಯೇಟರ್ ನಲ್ಲಿ ಕಾಲ್ತುಳಿತದಲ್ಲಿ ಮಹಿಳೆ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ತೆಲುಗು ಚಿತ್ರರಂಗದ ಖ್ಯಾತ ನಟ ಅಲ್ಲು ಅರ್ಜುನ್ ಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಚಿಕ್ಕಡಪಲ್ಲಿ ಠಾಣೆ ಪೊಲೀಸರಿಂದ ಬಂಧಿಸಲ್ಪಟ್ಟಿದ್ದ ನಟ ಅಲ್ಲು ಅರ್ಜುನ್ ಅವರನ್ನು ಪೊಲೀಸರು ನಾಂಪಲ್ಲಿ ಕೋರ್ಟ್ ಗೆ ಹಾಜರುಪಡಿಸಿದ್ದರು. ಈ ವೇಳೆ ಕೋರ್ಟ್ ಅಲ್ಲು ಅರ್ಜುನ್ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಅಲ್ಲು ಅರ್ಜುನ್ ಜೈಲುಪಾಲಾಗಿದ್ದಾರೆ.


