ಬೆಳಗಾವಿ: ಜೆಎಂಎಫ್ ಸಿ ನ್ಯಾಯಾಲಯವು ಪರಿಷತ್ ಸದಸ್ಯ ಸಿ.ಟಿ ರವಿ ಬಂಧನ ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾಯಿಸಿ ಆದೇಶಿಸಿತ್ತು. ಈ ಹಿನ್ನಲೆಯಲ್ಲಿ ಬೆಳಗಾವಿಯಿಂದ ಬೆಂಗಳೂರಿಗೆ ಸಿ.ಟಿ ರವಿಯನ್ನು ಪೊಲೀಸರು ಕರೆದೊಯ್ಯುತ್ತಿದ್ದಾರೆ.
ನಿನ್ನೆಯ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದ ಬಳಕೆ ಸಂಬಂಧ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಆ ಬಳಿಕ ಅವರನ್ನು ಪೊಲೀಸರು ಬಂಧಿಸಿದ್ದರು. ಇಂದು ಬೆಳಗಾವಿ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಸಿ.ಟಿ ರವಿ ಅವರನ್ನು ಹಾಜರುಪಡಿಸಿದ್ದರು. ಈ ಪ್ರಕರಣ ವಿಚಾರಣೆ ನಡೆಸಿದಂತ ನ್ಯಾಯಪೀಠವು, ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಕೇಸ್ ವರ್ಗಾವಣೆ ಮಾಡಿತ್ತು.
ಈ ಹಿನ್ನಲೆಯಲ್ಲಿ ರಸ್ತೆ ಮಾರ್ಗದ ಮೂಲಕ ಬೆಳಗಾವಿಯಿಂದ ಬೆಂಗಳೂರಿಗೆ ಪೊಲೀಸರು ಪರಿಷತ್ ಸದಸ್ಯ ಸಿ.ಟಿ ರವಿ ಅವರನ್ನು ಕರೆದೊಯ್ಯುತ್ತಿದ್ದಾರೆ. ಬೆಳಗಾವಿ, ದಾವಣಗೆರೆ, ಚಿತ್ರದುರ್ಗ, ಹಿರಿಯೂರು, ತುಮಕೂರು ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬೆಂಗಳೂರಿಗೆ ಕರೆದೊಯ್ಯುತ್ತಿದ್ದಾರೆ. ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಯಾವ ತೀರ್ಪು ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.