ಪುತ್ತೂರು: ಮನೆಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳ್ಳತನಗೈದ ಘಟನೆ ಸರ್ವೆ ಗ್ರಾಮದ ಭಕ್ತಕೋಡಿಯಲ್ಲಿ ಹಾಡ ಹಾಗಲೇ ಘಟನೆ ನಡೆದ ವರದಿಯಾಗಿದೆ.
ಭಕ್ತಕೋಡಿ ಸರಕಾರಿ ಆಸ್ಪತ್ರೆ ಬಳಿಯ ಕಿಶೋರ್ ಅವರ ಮನೆಯ ಹಿಂಬಾಗಿಲನ್ನು ಮುರಿದು ಒಳಪ್ರವೇಶಿಸಿದ ಕಳ್ಳರು ಮನೆಯ ಕಪಾಟಿನಲ್ಲಿರಿಸಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದೋಚಿದ್ದಾರೆ. ಸುಮಾರು 11 ಪವನ್ ಚಿನ್ನ ಕಳ್ಳರ ಪಾಲಾಗಿದೆ ಎನ್ನಲಾಗಿದೆ.
ಪೊಲೀಸರು ಘಟನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳ್ಳತನ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.